Monday, September 7, 2026
Join WhatsApp Group
HomeLocal Newsಗಡಿ ದಾಟಿದವನ ವಿರುದ್ಧ ಮತ್ತೊಂದು ಪ್ರಕರಣ!

ಗಡಿ ದಾಟಿದವನ ವಿರುದ್ಧ ಮತ್ತೊಂದು ಪ್ರಕರಣ!

ಬನವಾಸಿ: ಉತ್ತರ ಕನ್ನಡ ಜಿಲ್ಲೆಯಿಂದ ಆರು ತಿಂಗಳ ಕಾಲ ಗಡಿಪಾರು ಮಾಡಲಾಗಿದ್ದ ಆರೋಪಿಯೊಬ್ಬ ಗಡಿಪಾರು ಆದೇಶವನ್ನು ಉಲ್ಲಂಘಿಸಿ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಬನವಾಸಿ ಪೊಲೀಸ್ ಠಾಣೆಯಲ್ಲಿ ಹೊಸ ಪ್ರಕರಣ ದಾಖಲಾಗಿದೆ.

ಬದನಗೊಡ ಗ್ರಾಮದ ಸ್ವಾಮೇಲಾ ಅಲಿಯಾಸ್ ಸುನೀಲ್ ಚಂದ್ರಪ್ಪ ಭೋವಿವಡ್ಡರ ವಿರುದ್ಧ ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ, ಬೆದರಿಕೆ ಸೇರಿದಂತೆ ಒಟ್ಟು ಏಳು ಪ್ರಕರಣಗಳು ದಾಖಲಾಗಿದ್ದವು. ಆರೋಪಿಯ ಚಟುವಟಿಕೆಗಳಿಂದ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ ಆತನನ್ನು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಪೊಲೀಸರು ಪ್ರಸ್ತಾವನೆ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ಶಿರಸಿ ಉಪವಿಭಾಗಾಧಿಕಾರಿ ಹಾಗೂ ಉಪವಿಭಾಗೀಯ ದಂಡಾಧಿಕಾರಿಗಳ ನ್ಯಾಯಾಲಯವು ಆರೋಪಿಯನ್ನು ಆರು ತಿಂಗಳ ಅವಧಿಗೆ ಉತ್ತರ ಕನ್ನಡ ಜಿಲ್ಲೆಯಿಂದ ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡುವಂತೆ ಆದೇಶ ನೀಡಿತ್ತು.

ಅದರಂತೆ ಮಾರ್ಚ್ 17ರಂದು ಆರೋಪಿಯನ್ನು ಯಾದಗಿರಿ ಶಹರ ಪೊಲೀಸ್ ಠಾಣೆಗೆ ಹಾಜರುಪಡಿಸಲಾಗಿತ್ತು. ಆರಂಭದಲ್ಲಿ ಆತ ಯಾದಗಿರಿ ಠಾಣೆಯಲ್ಲಿ ಹಾಜರಾತಿ ದಾಖಲಿಸಿದ್ದರೂ, ಬಳಿಕ ಗಡಿಪಾರು ಆದೇಶ ಜಾರಿಯಲ್ಲಿದ್ದ ಅವಧಿಯಲ್ಲಿ ಯಾದಗಿರಿ ಜಿಲ್ಲೆಯಲ್ಲಿ ವಾಸಿಸದೆ ಅಲ್ಲಿಂದ ತಪ್ಪಿಸಿಕೊಂಡು ಬೇರೆಡೆ ಕದ್ದುಮುಚ್ಚಿ ಓಡಾಡುತ್ತಿರುವುದು ಪೊಲೀಸರ ಗಮನಕ್ಕೆ ಬಂದಿದೆ.

ಈ ಹಿನ್ನೆಲೆಯಲ್ಲಿ ಬನವಾಸಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಮಹಾಂತಪ್ಪ ಕುಂಬಾರ ನೀಡಿದ ದೂರಿನ ಮೇರೆಗೆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share