Monday, September 7, 2026
Join WhatsApp Group
HomeLocal Newsಗಾಂಜಾ ಸೇವನೆ: ಇಬ್ಬರ ವಿರುದ್ಧ ಪ್ರತ್ಯೇಕ ಪ್ರಕರಣ

ಗಾಂಜಾ ಸೇವನೆ: ಇಬ್ಬರ ವಿರುದ್ಧ ಪ್ರತ್ಯೇಕ ಪ್ರಕರಣ

ಶಿರಸಿ: ಗಾಂಜಾ ಮಾದಕ ವಸ್ತು ಸೇವನೆ ಮಾಡಿದ ಆರೋಪದಡಿ ಬನವಾಸಿ ಪೊಲೀಸರು ಇಬ್ಬರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ.

ದಾಸನಕೊಪ್ಪ ಪಂಚಾಯತ್ ಕಚೇರಿ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿರುವ ಅನುಮಾನದ ಮೇರೆಗೆ ಬನವಾಸಿ ಠಾಣೆಯ ಪೊಲೀಸ್ ಉಪನಿರೀಕ್ಷಕ ಮಹಾಂತಪ್ಪ ಜಿ. ಕುಂಬಾರ ನೇತೃತ್ವದ ತಂಡ ಇಬ್ಬರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿತು.

ಮೊದಲ ಪ್ರಕರಣದಲ್ಲಿ ಬದನಗೋಡ ನಿವಾಸಿ ಆಸೀಸ್ @ ಅಭಿಷೇಕ್ ಉಡಚಪ್ಪ ಭೋವಿವಡ್ಡರ್ (23) ಎಂಬಾತನನ್ನು ವಶಕ್ಕೆ ಪಡೆಯಲಾಗಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಆತನ ವಿರುದ್ಧ ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಬದನಗೋಡದ ಸಂತೋಷ ಫಕೀರಪ್ಪ ಭೋವಿವಡ್ಡರ (27) ಎಂಬಾತನ ವಿರುದ್ಧವೂ ಇದೇ ಆರೋಪದಡಿ ಕ್ರಮ ಕೈಗೊಳ್ಳಲಾಗಿದೆ. ದಾಸನಕೊಪ್ಪ ಪಂಚಾಯತ್ ಕಚೇರಿ ಸಮೀಪ ಗಾಂಜಾ ಸೇವನೆ ಮಾಡಿರುವ ಶಂಕೆಯ ಮೇರೆಗೆ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಎರಡೂ ಪ್ರಕರಣಗಳಲ್ಲಿ ಬನವಾಸಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share