Friday, July 24, 2026
Join WhatsApp Group
HomeStateಚಪ್ಪಲಿ ನಮ್ಮ ಮನೆ ದೇವರು!

ಚಪ್ಪಲಿ ನಮ್ಮ ಮನೆ ದೇವರು!

ಬೆಂಗಳೂರು: ಬೂಕರ್‌ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಬಾನು ಮುಸ್ತಾಕ್ ಅವರು ಕಾರ್ಯಕ್ರಮವೊಂದರಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.‌ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಚಪ್ಪಲಿ ಧರಿಸಿಕೊಂಡೇ ಪುಷ್ಪನಮನ ಸಲ್ಲಿಸಿದ್ದು ವಿವಾದಕ್ಕೆ ಕಾರಣವಾಗಿದೆ.

ನಗರದ ಅಂಬೇಡ್ಕರ್‌ ಭವನದಲ್ಲಿ, ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ಎಂ.ಬಿ. ಶ್ರೀನಿವಾಸ್ ಪ್ರತಿಷ್ಠಾಪನದ ವತಿಯಿಂದ ‘ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಜನಜಾಗೃತಿ ಸಮಾವೇಶ’ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಾನು ಮುಷ್ತಾಕ್ ಅವರು ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಚಪ್ಪಲಿ ಧರಿಸಿಕೊಂಡೇ ಪುಷ್ಪನಮನ ಸಲ್ಲಿಸಿದರು.

ಈ ವೇಳೆ ಅವರು ಚಪ್ಪಲಿ ಧರಿಸಿರುವುದನ್ನು ಗಮನಿಸಿದ ಕಾರ್ಯಕ್ರಮದ ಸಂಘಟಕರು, ಚಪ್ಪಲಿ ತೆಗೆದು ಪುಷ್ಪನಮನ ಸಲ್ಲಿಸುವಂತೆ ಮನವಿ ಮಾಡಿದರು. ಆದರೆ ಬಾನು ಮುಷ್ತಾಕ್ ಅವರು ಅದಕ್ಕೆ ಒಪ್ಪದೇ, ಚಪ್ಪಲಿ ಧರಿಸಿಕೊಂಡೇ ನಮನ ಸಲ್ಲಿಸಿದರು.

ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, “ಚಪ್ಪಲಿ ಹೊಲಿಯುವುದು ನಮ್ಮ ವೃತ್ತಿ. ಅದು ನಮ್ಮ ಮನೆ ದೇವರು. ಅದು ನಮ್ಮ ಅಸ್ಮಿತೆಯ ಸಂಕೇತ. ನಾವು ಚಪ್ಪಲಿ ಹೊಲಿಯುವವರು. ಅದಕ್ಕೆ ನಮಗೆ ಅಪಾರ ಗೌರವ ಇದೆ. ಆದ್ದರಿಂದ ನಾನು ಚಪ್ಪಲಿ ಬಿಚ್ಚುವುದಿಲ್ಲ” ಎಂದು ತಿಳಿಸಿದ್ದಾರೆ. ಅವರ ಈ ಹೇಳಿಕೆ ಇದೀಗ ಸಾರ್ವಜನಿಕ ವಲಯದಲ್ಲಿ ಪರ–ವಿರೋಧ ಚರ್ಚೆಗೆ ಕಾರಣವಾಗಿದೆ.

ಇನ್ನೊಂದೆಡೆ, ಈ ಘಟನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಹಿಂದೂ ಸಂಘಟನೆಗಳ ಪ್ರಮುಖ ಪ್ರಮೋದ್‌ ಮುತಾಲಿಕ್, ಸಾಹಿತಿ ಬಾನು ಮುಷ್ತಾಕ್ ಅವರ ವರ್ತನೆ ಅಕ್ಷಮ್ಯ. ಸಾಹಿತಿ ಬಾನು ಮುಷ್ತಾಕ್ ಅವರ ಈ ರೀತಿಯ ವರ್ತನೆಗೆ ಕಾಂಗ್ರೆಸ್ ಸರ್ಕಾರವೇ ಕಾರಣ. ದಸರಾ ಉದ್ಘಾಟನೆ ನೀಡಿದ ಬಳಿಕ ಹೀಗೆ ವರ್ತಿಸುತ್ತಿದ್ದಾರೆ. ಅವರು ಬಹಿರಂಗವಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಘಟನೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳು ಹಾಗೂ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ ಹುಟ್ಟುಹಾಕಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share