Friday, July 24, 2026
Join WhatsApp Group
HomeLocal Newsಆತಂಕ ಮೂಡಿಸಿದ ಕರಡಿ ದರ್ಶನ

ಆತಂಕ ಮೂಡಿಸಿದ ಕರಡಿ ದರ್ಶನ

ಅಂಬಿಕಾನಗರ: ದಟ್ಟ ಅರಣ್ಯ ಪ್ರದೇಶದ ನಡುವೆ ಇರುವ ಅಂಬಿಕಾನಗರದಲ್ಲಿ ಶನಿವಾರ ಬೆಳಗಿನ ಜಾವ ಕರಡಿಯೊಂದು ಮುಖ್ಯ ರಸ್ತೆಯಲ್ಲಿ ಸಂಚರಿಸಿದ ಘಟನೆ ಸ್ಥಳೀಯರು ಹಾಗೂ ಕೆಪಿಸಿ ನೌಕರರಲ್ಲಿ ಆತಂಕ ಮೂಡಿಸಿದೆ.

ಶನಿವಾರ ಬೆಳಗ್ಗೆ ಸುಮಾರು 6 ಗಂಟೆ ಸುಮಾರಿಗೆ ದಟ್ಟ ಕಾಡಿನಿಂದ ಹೊರಬಂದ ಕರಡಿಯೊಂದು ಅಂಬಿಕಾನಗರ ಪವರ್‌ಹೌಸ್ ಸಮೀಪದ ಮುಖ್ಯ ರಸ್ತೆಯಲ್ಲಿ ನಿಧಾನವಾಗಿ ಸಾಗುತ್ತಿರುವುದು ವಾಹನ ಸವಾರರ ಗಮನಕ್ಕೆ ಬಂದಿದೆ.

ರಸ್ತೆಯಲ್ಲಿ ಸಾಗುತ್ತಿದ್ದ ಕರಡಿಯ ಎದುರಿಗೆ ವಾಹನ ಬರುತ್ತಿರುವುದನ್ನು ಕಂಡು ಗಾಬರಿಗೊಂಡ ಕರಡಿ ತಕ್ಷಣ ಹಿಂದಿರುಗಿ ಅದೇ ರಸ್ತೆಯಲ್ಲೇ ಓಡಿದೆ. ಈ ಅಪರೂಪದ ದೃಶ್ಯವನ್ನು ವಾಹನದಲ್ಲಿದ್ದವರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ಅದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ದಾಂಡೇಲಿ ಸುತ್ತಮುತ್ತ ದಟ್ಟ ಅರಣ್ಯ ಪ್ರದೇಶ ಇರುವುದರಿಂದ ಇತ್ತೀಚಿನ ದಿನಗಳಲ್ಲಿ ಕರಡಿ ಸೇರಿದಂತೆ ವಿವಿಧ ವನ್ಯಜೀವಿಗಳ ಸಂಚಾರ ಹೆಚ್ಚಾಗಿರುವುದು ಕಂಡುಬರುತ್ತಿದೆ. ಆಹಾರ ಅರಸಿ ಕಾಡುಪ್ರಾಣಿಗಳು ಜನವಸತಿ ಪ್ರದೇಶಗಳತ್ತ ಬರುತ್ತಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಕರಡಿ ಸೇರಿದಂತೆ ವನ್ಯಜೀವಿಗಳ ಚಲನವಲನದ ಮೇಲೆ ಅರಣ್ಯ ಇಲಾಖೆ ನಿಗಾ ವಹಿಸಿ, ಜನರ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share