Friday, July 24, 2026
Join WhatsApp Group
HomeStateಭೀಕರ ಅಪಘಾತ; ಐವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾ*ವು

ಭೀಕರ ಅಪಘಾತ; ಐವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾ*ವು

ಬೆಂಗಳೂರು: ನಗರವನ್ನು ಬೆಚ್ಚಿಬೀಳಿಸುವ ಮತ್ತೊಂದು ಭೀಕರ ರಸ್ತೆ ಅಪ*ಘಾತ ಬೆಂಗಳೂರು ಹೊರವಲಯದಲ್ಲಿ ಸಂಭವಿಸಿದೆ. ತುಮಕೂರು ರಸ್ತೆಯ ನವಯುಗ ಟೋಲ್‌ ಸಮೀಪದ ಜಿಂದಲ್‌ ಆಸ್ಪತ್ರೆ ಫ್ಲೈಓವರ್‌ ಮೇಲೆ ನಡೆದ ಈ ದುರಂತದಲ್ಲಿ ಐವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಮೃ*ತಪಟ್ಟಿದ್ದಾರೆ.

ನೆಲಮಂಗಲ ಟೋಲ್‌ ಬಳಿ ಅತಿವೇಗವಾಗಿ ಸಾಗುತ್ತಿದ್ದ ಟಾಟಾ ಇಂಡಿಕಾ ಕಾರು ನಿಯಂತ್ರಣ ತಪ್ಪಿ ಹುಬ್ಬಳ್ಳಿಗೆ ತೆರಳುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಐವರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ಬಸ್‌ ಬೆಂಗಳೂರಿನಿಂದ ಹುಬ್ಬಳ್ಳಿ ಕಡೆ ಹೊರಟಿತ್ತು.

ಅಪಘಾತದ ನಂತರ ಬಸ್‌ನ ಪ್ರಯಾಣಿಕರನ್ನು ತಕ್ಷಣವೇ ಮತ್ತೊಂದು ಬಸ್‌ ಮೂಲಕ ಗಮ್ಯಸ್ಥಾನಕ್ಕೆ ಕಳುಹಿಸಲಾಗಿದೆ. ಬಸ್‌ನ ಮುಂಭಾಗದಲ್ಲಿ ಕುಳಿತಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ಸ್ಥಳದಲ್ಲೇ ಚಿಕಿತ್ಸೆ ನೀಡಲಾಗಿದೆ.

ಪ್ರಾಥಮಿಕ ತನಿಖೆಯ ಪ್ರಕಾರ ಕಾರಿನ ಅತಿವೇಗವೇ ಈ ದುರಂತಕ್ಕೆ ಕಾರಣವೆಂದು ಪೊಲೀಸರು ತಿಳಿಸಿದ್ದಾರೆ. ಡಿಕ್ಕಿಯ ರಭಸದಿಂದ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ, ಕೆಲಕಾಲ ಅಸ್ತವ್ಯಸ್ತಗೊಂಡಿದ್ದ ಟ್ರಾಫಿಕ್‌ ಸಂಚಾರವನ್ನು ಪುನಃ ಸುವ್ಯವಸ್ಥಿತಗೊಳಿಸಿದರು.

ಹೊಸಕೋಟೆ ದುರಂತ ತಲೆಯಿಂದ ಮಾಸುವ ಮುನ್ನವೇ ಈ ಭೀಕತ ಅಪಘಾತ ಸಂಭವಿಸಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share