Friday, July 24, 2026
Join WhatsApp Group
HomeStateಪಾಸ್‌ಪೋರ್ಟ್‌ ಕಚೇರಿಗೆ ಬಾಂಬ್‌ ಬೆದರಿಕೆ

ಪಾಸ್‌ಪೋರ್ಟ್‌ ಕಚೇರಿಗೆ ಬಾಂಬ್‌ ಬೆದರಿಕೆ

ಬೆಂಗಳೂರು: ನಗರದಲ್ಲಿರುವ ಪಾಸ್‌ಪೋರ್ಟ್‌ ಕಚೇರಿಗೆ ಹುಸಿ ಬಾಂಬ್‌ ಬೆದರಿಕೆ ಇ-ಮೇಲ್‌ ಬಂದ ಘಟನೆ ಕೆಲಕಾಲ ಆತಂಕಕ್ಕೆ ಕಾರಣವಾಯಿತು. ತಮಿಳು ಭಾಷೆಯಲ್ಲಿ ಕಳುಹಿಸಲಾದ ಈ ಇ-ಮೇಲ್‌ನಲ್ಲಿ, 2008ರ ಮುಂಬೈ ದಾಳಿಯ ಆರೋಪಿ ಅಜ್ಮಲ್‌ ಕಸಬ್‌ಗೆ ನೇಣು ಹಾಕಿದ ವಿಚಾರವನ್ನು ಉಲ್ಲೇಖಿಸಿ ಬೆದರಿಕೆ ಸಂದೇಶ ಬರೆಯಲಾಗಿತ್ತು.

ಸಂದೇಶದಲ್ಲಿ “ಕಚೇರಿಯಲ್ಲೇ ಸ್ಫೋಟಕ ಇರಿಸಲಾಗಿದೆ, ಕೆಲವೇ ಹೊತ್ತಿನಲ್ಲಿ ಸ್ಫೋಟವಾಗಲಿದೆ” ಎಂದು ಬೆದರಿಕೆ ಹಾಕಲಾಗಿತ್ತು. ಮಾಹಿತಿ ತಿಳಿದ ತಕ್ಷಣ ಕೋರಮಂಗಲ ಪೊಲೀಸ್‌ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.

ಪಾಸ್‌ಪೋರ್ಟ್‌ ಕಚೇರಿಯ ದೈನಂದಿನ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಕಚೇರಿ ಆವರಣವನ್ನು ಸಂಪೂರ್ಣವಾಗಿ ಖಾಲಿ ಮಾಡಿಸಲಾಯಿತು. ನಂತರ ಬಾಂಬ್‌ ನಿಷ್ಕ್ರಿಯ ದಳ ಕಟ್ಟಡದ ಪ್ರತಿಯೊಂದು ಕೊಠಡಿ, ಪಾರ್ಕಿಂಗ್‌ ಪ್ರದೇಶ ಹಾಗೂ ಸುತ್ತಮುತ್ತಲಿನ ವಲಯವನ್ನು ಸೂಕ್ಷ್ಮವಾಗಿ ಪರಿಶೀಲಿಸಿವೆ.

ಹಲವು ಗಂಟೆಗಳ ತಪಾಸಣೆಯ ಬಳಿಕ ಇದು ಹುಸಿ ಬಾಂಬ್‌ ಬೆದರಿಕೆ ಎಂಬುದು ದೃಢಪಟ್ಟಿದ್ದು, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಈ ಘಟನೆಯ ಸಂಬಂಧ ತನಿಖೆ ಮುಂದುವರಿದಿದ್ದು, ಇ-ಮೇಲ್‌ ಕಳುಹಿಸಿದ ವ್ಯಕ್ತಿಯನ್ನು ಪತ್ತೆಹಚ್ಚಲು ಸೈಬರ್‌ ತಂಡಗಳು ಕ್ರಮ ಕೈಗೊಂಡಿವೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share