Friday, July 24, 2026
Join WhatsApp Group
HomeStateಬೈಕ್‌ಗೆ ಹಿಂಬದಿಯಿಂದ ಗುದ್ದಿದ ಬಸ್‌; ಸವಾರನ ಬದುಕು ಅಂತ್ಯ

ಬೈಕ್‌ಗೆ ಹಿಂಬದಿಯಿಂದ ಗುದ್ದಿದ ಬಸ್‌; ಸವಾರನ ಬದುಕು ಅಂತ್ಯ

ಮೈಸೂರು: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದಲ್ಲಿ ಸರ್ಕಾರಿ ಬಸ್ ಒಂದು ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃ*ತಪಟ್ಟಿರುವ ದುರ್ಘಟನೆ ನಡೆದಿದೆ.

ಮೃ*ತರನ್ನು ಹರೀನಹಳ್ಳಿ ಗ್ರಾಮದ ಜಗದೀಶ್ (66) ಎಂದು ಗುರುತಿಸಲಾಗಿದೆ. ಜಗದೀಶ್ ಅವರು ಪಿರಿಯಾಪಟ್ಟಣದಿಂದ ಬೆಟ್ಟದಪುರ ಕಡೆಗೆ ಬರುತ್ತಿದ್ದ ವೇಳೆ, ಡಿಟಿಎಂಎನ್ ಶಾಲಾ ಮುಂಭಾಗದಲ್ಲಿ ಹಿಂಬದಿಯಿಂದ ಬಂದ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದ ಪರಿಣಾಮ ಜಗದೀಶ್ ಅವರು ಬಸ್ ಚಕ್ರದಡಿ ಸಿಲುಕಿದ್ದು, ತಲೆ ಮತ್ತು ದೇಹದ ಹಲವು ಭಾಗಗಳಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವಗೊಂಡ ಸ್ಥಿತಿಯಲ್ಲಿ ರಸ್ತೆ ಮೇಲೆ ಬಿದ್ದಿದ್ದರು. ಸ್ಥಳೀಯರು ತಕ್ಷಣ ಆಂಬುಲೆನ್ಸ್ ಮೂಲಕ ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು. ಆದರೆ ವೈದ್ಯರು ಪರೀಕ್ಷಿಸಿದಾಗ ಅವರು ಮೃ*ತಪಟ್ಟಿರುವುದಾಗಿ ತಿಳಿಸಿದರು.

ಮೃತರ ಪುತ್ರ ದೀಲಿಪ್ ಹೆಚ್.ಜೆ ಅವರು, ಸರ್ಕಾರಿ ಬಸ್ ಚಾಲಕನ ಅತಿವೇಗ ಮತ್ತು ಅಜಾಗರೂಕತೆಯೇ ತಮ್ಮ ತಂದೆಯ ಸಾ*ವಿಗೆ ಕಾರಣ ಎಂದು ಆರೋಪಿಸಿ, ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬೆಟ್ಟದಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಕುರಿತು ಬೆಟ್ಟದಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share