Monday, September 7, 2026
Join WhatsApp Group
HomeCrimeಅಕ್ರಮ ಗಾಂಜಾ ಮಾರಾಟ: ಆಟೋ ಚಾಲಕನ ಬಂಧನ

ಅಕ್ರಮ ಗಾಂಜಾ ಮಾರಾಟ: ಆಟೋ ಚಾಲಕನ ಬಂಧನ

ಭಟ್ಕಳ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಭಟ್ಕಳ ಗ್ರಾಮೀಣ ಪೊಲೀಸರು ಬಂಧಿಸಿ, ಆತನಿಂದ ಮಾದಕ ವಸ್ತು ಹಾಗೂ ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ.

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಹೆಬಳೆ ಗ್ರಾಮದ ವರಕೊಡ್ಲು ಮೈದಾನದಲ್ಲಿ ಗಾಂಜಾ ಮಾರಾಟ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದರು. ಈ ವೇಳೆ ಶಿರುಕುಳಿಹೊಂಡದ ಆಜಾದ್ ನಗರ 8ನೇ ಕ್ರಾಸ್ ನಿವಾಸಿ, ಆಟೋ ಚಾಲಕ ಮಹ್ಮದ್ ಅಖಿಲ್ (25) ಎಂಬಾತನನ್ನು ಬಂಧಿಸಲಾಗಿದೆ.

ಆರೋಪಿಯಿಂದ ಸುಮಾರು ₹15 ಸಾವಿರ ಮೌಲ್ಯದ 129 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ KA-20/A-9771 ಸಂಖ್ಯೆಯ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಭಟ್ಕಳ ಗ್ರಾಮೀಣ ಠಾಣೆಯ ಪಿಐ ನೇತೃತ್ವದಲ್ಲಿ ಪಿಎಸ್‌ಐಗಳಾದ ಮಲ್ಲಿಕಾರ್ಜುನಯ್ಯ ಕೋರಾಣಿ, ಭರಮಪ್ಪ ಬೆಳಗಲಿ ಸೇರಿದಂತೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಪ್ರಕರಣವನ್ನು ಯಶಸ್ವಿಯಾಗಿ ಪತ್ತೆಹಚ್ಚಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಇಲಾಖೆಯು ಅಭಿನಂದಿಸಿದೆ.

 ಸಾರ್ವಜನಿಕರಿಗೆ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆಯ ಬಗ್ಗೆ ಮಾಹಿತಿ ದೊರೆತಲ್ಲಿ ತಕ್ಷಣ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share