Friday, July 24, 2026
Join WhatsApp Group
HomeCrime3.49 ಲಕ್ಷ ರೂ ಮೌಲ್ಯದ ನಗ-ನಾಣ್ಯ ದೋಚಿದ ಕಳ್ಳರು

3.49 ಲಕ್ಷ ರೂ ಮೌಲ್ಯದ ನಗ-ನಾಣ್ಯ ದೋಚಿದ ಕಳ್ಳರು

ಭಟ್ಕಳ: ತಾಲೂಕಿನ ಪುರವರ್ಗ ಪ್ರದೇಶದ ಮನೆಯಲ್ಲಿ ಕಳ್ಳತನ ನಡೆದಿದ್ದು, 3.49 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣ ಕಳುವಾಗಿರುವ ಕುರಿತು ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಣೇಶನಗರ, ಪುರವರ್ಗ ನಿವಾಸಿ ಬೀಬಿ ಇನ್ಸಿಯಾ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಮೇ 18ರ ಸಂಜೆ 5.40ರಿಂದ ಮೇ 20ರ ಬೆಳಗ್ಗೆ 8 ಗಂಟೆಯ ನಡುವಿನ ಅವಧಿಯಲ್ಲಿ ಯಾರೋ ಕಳ್ಳರು ಮನೆಯೊಳಗೆ ನುಗ್ಗಿ ಬೆಡ್‌ರೂಮ್‌ಗೆ ಹಾಕಿದ್ದ ಬೀಗವನ್ನು ಒಡೆದಿದ್ದಾರೆ. ಬಳಿಕ ಕಪಾಟಿನಲ್ಲಿದ್ದ 10 ಗ್ರಾಂ ತೂಕದ ಒಂದು ಬಂಗಾರದ ನೆಕ್ಲೆಸ್‌, 14 ಗ್ರಾಂ ತೂಕದ ಎರಡು ಕಿವಿಯೋಲೆಗಳು ಸೇರಿದಂತೆ ಒಟ್ಟು 24 ಗ್ರಾಂ ಬಂಗಾರದ ಆಭರಣಗಳನ್ನು ಕಳವು ಮಾಡಿದ್ದಾರೆ. ಕಳುವಾದ ಚಿನ್ನಾಭರಣಗಳ ಮೌಲ್ಯ ಸುಮಾರು 3.12 ಲಕ್ಷ ರೂ ಎಂದು ಅಂದಾಜಿಸಲಾಗಿದೆ.

ಇದಲ್ಲದೆ ಮನೆಯಲ್ಲಿ ಇರಿಸಲಾಗಿದ್ದ 37 ಸಾವಿರ ರೂ ನಗದು ಹಣವನ್ನೂ ಕಳ್ಳರು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share