Sunday, September 6, 2026
Join WhatsApp Group
HomeCrimeಇನ್‌ಸ್ಟಾಗ್ರಾಂನಲ್ಲಿ ಮಕ್ಕಳ ಅಶ್ಲೀಲ ವಿಡಿಯೋ: ಭಟ್ಕಳದಲ್ಲಿ ಗಂಭೀರ ಪ್ರಕರಣ

ಇನ್‌ಸ್ಟಾಗ್ರಾಂನಲ್ಲಿ ಮಕ್ಕಳ ಅಶ್ಲೀಲ ವಿಡಿಯೋ: ಭಟ್ಕಳದಲ್ಲಿ ಗಂಭೀರ ಪ್ರಕರಣ

ಭಟ್ಕಳ: ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂ ಮೂಲಕ ಮಕ್ಕಳ ಅಶ್ಲೀಲ ಚಿತ್ರ ಹಾಗೂ ವಿಡಿಯೋಗಳನ್ನು ವೀಕ್ಷಿಸಿ ಮತ್ತೊಬ್ಬರಿಗೆ ರವಾನಿಸಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಭಟ್ಕಳ ಟೌನ್ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

“akshay_madival” ಹೆಸರಿನ ಇನ್‌ಸ್ಟಾಗ್ರಾಂ ಖಾತೆಯನ್ನು ಬಳಸುತ್ತಿದ್ದ ವ್ಯಕ್ತಿ ಮಕ್ಕಳ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿ, ಅವುಗಳನ್ನು ಮತ್ತೊಂದು ಇನ್‌ಸ್ಟಾಗ್ರಾಂ ಖಾತೆಗೆ ಕಳುಹಿಸಿರುವ ಆರೋಪ ಕೇಳಿಬಂದಿದೆ. ಈ ಕುರಿತು ಸರ್ಕಾರದ ಪರವಾಗಿ ಭಟ್ಕಳ ಟೌನ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ನವೀನ್ ನಾಯ್ಕ್ ದೂರು ದಾಖಲಿಸಿದ್ದಾರೆ.

ಏಪ್ರಿಲ್ 25ರಂದು ಸಂಜೆ 6.36ರಿಂದ 6.37ರ ಅವಧಿಯಲ್ಲಿ ಆರೋಪಿ ತನ್ನ ಇನ್‌ಸ್ಟಾಗ್ರಾಂ ಖಾತೆ ಮೂಲಕ ಮಕ್ಕಳ ಅಶ್ಲೀಲ ಚಿತ್ರ ಹಾಗೂ ವಿಡಿಯೋಗಳನ್ನು ತೆರೆದು ವೀಕ್ಷಿಸಿದ್ದಾನೆ. ಬಳಿಕ “Navya” ಎಂಬ ಶೀರ್ಷಿಕೆಯಡಿ ಕಾರ್ಯನಿರ್ವಹಿಸುತ್ತಿದ್ದ “magicpeach2204” ಹೆಸರಿನ ಮತ್ತೊಂದು ಇನ್‌ಸ್ಟಾಗ್ರಾಂ ಖಾತೆಗೆ ಆ ದೃಶ್ಯಗಳನ್ನು ಕಳುಹಿಸಿರುವ ಆರೋಪ ದಾಖಲಾಗಿದೆ.

ಮಕ್ಕಳ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸುವುದು, ಸಂಗ್ರಹಿಸುವುದು, ಹಂಚಿಕೊಳ್ಳುವುದು ಅಥವಾ ಪ್ರಸಾರ ಮಾಡುವುದು ಕಾನೂನುಬಾಹಿರ ಎಂಬ ಅರಿವಿದ್ದರೂ ಈ ಕೃತ್ಯ ಎಸಗಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಭಟ್ಕಳ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಖಾತೆದಾರನ ಗುರುತು, ಡಿಜಿಟಲ್ ಸಾಕ್ಷ್ಯಗಳು ಹಾಗೂ ಕೃತ್ಯದ ಹಿನ್ನೆಲೆಯ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share