Thursday, October 22, 2026
HomeLocal Newsಭಟ್ಕಳ | ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ

ಭಟ್ಕಳ | ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ

ಭಟ್ಕಳ: ಕೆಲಸ ಇದೆ ಎಂದು ಹೇಳಿ ಮನೆಯಿಂದ ಹೊರಗೆ ಹೋದ 38 ವರ್ಷದ ವ್ಯಕ್ತಿಯೊಬ್ಬರು ವಾಪಸ್ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಭಟ್ಕಳ ತಾಲೂಕಿನ ಶಿರಾಲಿಯಲ್ಲಿ ನಡೆದಿದೆ.

ಭಟ್ಕಳ ತಾಲೂಕಿನ ಶಿರಾಲಿ ಎಂ.ಜಿ. ಪಾರ್ಟ್‌ ಹತ್ತಿರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅಪ್ಪಾಜಿ ಗಣಪತಿ ಗಣಾಚಾರಿ (38), ಬಂದರು ರಸ್ತೆ, ಕೋಕ್ತಿ, ಭಟ್ಕಳ ನಿವಾಸಿ. ಜು.20ರಂದು ಬೆಳಗ್ಗೆ 8.30ರ ಸುಮಾರಿಗೆ ಕೆಲಸ ಇದೆ ಎಂದು ಹೇಳಿ ಮನೆಯಿಂದ ಹೊರಗೆ ಹೋಗಿದ್ದರು. ಆದರೆ ಬಳಿಕ ಮನೆಗೆ ವಾಪಸ್ ಬಂದಿಲ್ಲ. ಸಂಬಂಧಿಕರ ಮನೆಗೂ ತೆರಳಿಲ್ಲ ಎಂದು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.

ನಾಪತ್ತೆಯಾಗಿರುವ ಅಪ್ಪಾಜಿ ಗಣಪತಿ ಗಣಾಚಾರಿ ಅವರು ಗೋಧಿ ಮೈಬಣ್ಣ, ಉದ್ದನೆಯ ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಸುಮಾರು 5.6 ಅಡಿ ಎತ್ತರವಿದ್ದಾರೆ. ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೊರಡುವಾಗ ಬೂದು ಬಣ್ಣದ ಪೂರ್ಣ ತೋಳಿನ ಶರ್ಟ್ ಹಾಗೂ ಕಪ್ಪು ಬಣ್ಣದ ನೈಟ್ ಪ್ಯಾಂಟ್ ಧರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಚಹರೆಯ ವ್ಯಕ್ತಿ ಸಾರ್ವಜನಿಕರಿಗೆ ಕಂಡುಬಂದಲ್ಲಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ 08385-227333, ಪಿಐ 9480805252 ಅಥವಾ ಕಾರವಾರ ಪೊಲೀಸ್ ಕಂಟ್ರೋಲ್ ರೂಂ 08382-226550 / 122 / 100 ಸಂಖ್ಯೆಗೆ ಮಾಹಿತಿ ನೀಡುವಂತೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ಸಬ್‌ಇನ್ಸ್‌ಪೆಕ್ಟರ್ ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share