ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಬಿಳಿ ಬಣ್ಣದ ಟ್ರಾವೆಲರ್ ಮಿನಿ ಬಸ್ ಕಳವಾಗಿರುವ ಬಗ್ಗೆ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಭಟ್ಕಳದ ಕೃಷ್ಣ ಅನಂತ ನಾಯ್ಕ ನೀಡಿದ ದೂರಿನಂತೆ, ಸೆ.27ರಂದು ಬೆಳಿಗ್ಗೆ 11 ಗಂಟೆಯಿಂದ ಸೆ.28ರಂದು ಮಧ್ಯಾಹ್ನ 12.30ರ ನಡುವಿನ ಅವಧಿಯಲ್ಲಿ ಭಟ್ಕಳದ ಮಣ್ಣುಳಿ ಬಳಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಕೆಎ 47/7838 ನೋಂದಣಿ ಸಂಖ್ಯೆಯ ಬಿಳಿ ಬಣ್ಣದ ಟ್ರಾವೆಲರ್ ಮಿನಿ ಬಸ್‌ನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದಾರೆ.
ಕಳವಾಗಿರುವ ಮಿನಿ ಬಸ್‌ನ್ನು ಪತ್ತೆಹಚ್ಚಿ, ಕೃತ್ಯ ಎಸಗಿದ ಆರೋಪಿಯನ್ನು ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೃಷ್ಣ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


