Saturday, June 13, 2026
HomeLocal Newsಮುರಿನಕಟ್ಟೆ ವಿವಾದ |ಸುಳ್ಳು ಸುದ್ದಿ ಶೂರರಿಗೆ ಎಚ್ಚರಿಕೆ!

ಮುರಿನಕಟ್ಟೆ ವಿವಾದ |ಸುಳ್ಳು ಸುದ್ದಿ ಶೂರರಿಗೆ ಎಚ್ಚರಿಕೆ!

ಭಟ್ಕಳ: ಮುರಿನಕಟ್ಟೆಯ ಸ್ಥಳಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಎಲ್ಲಾ ಸಮುದಾಯಗಳ ಹಿರಿಯ ನಾಗರಿಕರು ಹಾಗೂ ಮುಖಂಡರೊಂದಿಗೆ ಹಲವು ಸುತ್ತಿನ ಸಮಾಲೋಚನೆ ನಡೆಸಿ ಒಮ್ಮತದ ಅಭಿಪ್ರಾಯದ ಆಧಾರದ ಮೇಲೆ ಪರ್ಯಾಯ ಸ್ಥಳವನ್ನು ಗುರುತಿಸಿದೆ ಎಂದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.

ಈ ನಿರ್ಧಾರದ ಅನುಸಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹಾಗೂ ಸ್ಥಳೀಯ ತಾಲೂಕು ಆಡಳಿತದ ಸಹಯೋಗದೊಂದಿಗೆ ಗುರುತಿಸಲಾದ ಸ್ಥಳದಲ್ಲಿ ರಸ್ತೆ ಕಾಮಗಾರಿಯನ್ನು ಆರಂಭಿಸಲಾಗಿದೆ. ಕಾಮಗಾರಿ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಡಿಎಆರ್, ಕೆಎಸ್‌ಆರ್‌ಪಿ ಹಾಗೂ ಸ್ಪೆಷಲ್ ಆಕ್ಷನ್ ಫೋರ್ಸ್‌ಗಳನ್ನು ನಿಯೋಜಿಸಿ ಕಟ್ಟುನಿಟ್ಟಿನ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಕಾಮಗಾರಿ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವುದು, ಕೋಮು ಸೌಹಾರ್ದತೆಗೆ ಧಕ್ಕೆ ತರುವ ಅಥವಾ ದ್ವೇಷ ಪ್ರಚೋದಿಸುವ ಪೋಸ್ಟ್‌ಗಳು ಹಾಗೂ ವೀಡಿಯೊಗಳನ್ನು ಪ್ರಸಾರ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರಕನ್ನಡ ಜಿಲ್ಲಾ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share