Monday, September 7, 2026
Join WhatsApp Group
HomeLocal Newsಭಟ್ಕಳ | ಮುರಿನಕಟ್ಟೆಗೆ ಪರ್ಯಾಯ ಸ್ಥಳ ಗುರುತು

ಭಟ್ಕಳ | ಮುರಿನಕಟ್ಟೆಗೆ ಪರ್ಯಾಯ ಸ್ಥಳ ಗುರುತು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿ ವೇಳೆ ಸಾರ್ವಜನಿಕರ ಓಡಾಟ ಮತ್ತು ವಾಹನ ಸಂಚಾರಕ್ಕೆ ತೊಂದರೆಯಾಗದಂತೆ, ಭಟ್ಕಳ ನಗರದಲ್ಲಿರುವ ಅಮ್ಮನವರ ಹೊರೆಯನ್ನಿಡುವ (ಮುರಿನಕಟ್ಟೆ) ಸ್ಥಳಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಪ್ರಕ್ರಿಯೆ ಆರಂಭವಾಗಿದೆ.

ಈ ಕುರಿತು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಪ್ರಕಟಣೆ ಹೊರಡಿಸಿದ್ದು, ನಗರದ ವಿವಿಧ ಸಮುದಾಯಗಳ ಹಿರಿಯ ನಾಗರಿಕರು ಹಾಗೂ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಒಮ್ಮತದ ಆಧಾರದ ಮೇಲೆ ಪರ್ಯಾಯ ಸ್ಥಳವನ್ನು ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.

ಎಲ್ಲರ ಸಹಮತಿಯಂತೆ, ಪ್ರಸ್ತುತ ಅಮ್ಮನವರ ಹೊರೆಯನ್ನು ಇಡಲಾಗುತ್ತಿರುವ ರಸ್ತೆಯಲ್ಲೇ ಮಿಡಿಯನ್ ನಿರ್ಮಾಣಕ್ಕೆ ಲಭ್ಯವಿರುವ ಜಾಗವನ್ನು ಪರ್ಯಾಯ ಸ್ಥಳವಾಗಿ ಆಯ್ಕೆ ಮಾಡಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹಾಗೂ ಸ್ಥಳೀಯ ತಾಲೂಕು ಆಡಳಿತದ ಸಹಯೋಗದಲ್ಲಿ ಆಯ್ಕೆಗೊಂಡ ಸ್ಥಳದಲ್ಲಿ ಮಿಡಿಯನ್ ಮತ್ತು ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕುರಿತು ಸ್ಥಳೀಯ ಮುಖಂಡರೊಂದಿಗೆ ಜಿಲ್ಲಾಡಳಿತ ಸಮಾಲೋಚನೆ ಪ್ರಾರಂಭಿಸಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share