ಭಟ್ಕಳ: ರಾಯಲ್ ಎನ್‌ಫೀಲ್ಡ್ ಬುಲೆಟ್ ಬೈಕ್‌ನಲ್ಲಿ ಮಾರಾಟದ ಉದ್ದೇಶದಿಂದ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಎನ್ನಲಾದ 2 ಗ್ರಾಂ180 ಮಿ.ಗ್ರಾಂ MDMA ಮಾದಕ ವಸ್ತುವನ್ನು ಭಟ್ಕಳ ಶಹರ ಪೊಲೀಸರು ವಶಪಡಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಹ್ಮದ್ ರಿಜ್ವಾನ್ (34) ಎಂಬಾತನನ್ನು ಬಂಧಿಸಿದ್ದಾರೆ.
ವಶಪಡಿಸಿಕೊಂಡ ಮಾದಕ ವಸ್ತುವಿನ ಮೌಲ್ಯ ರೂ.21,800 ಎಂದು ಪೊಲೀಸರು ತಿಳಿಸಿದ್ದಾರೆ.ಅ.8ರಂದು ಮಧ್ಯಾಹ್ನ 12.45ರ ಸುಮಾರಿಗೆ ಭಟ್ಕಳ ನಗರದ ಪುರಸಭೆ ಪಕ್ಕದ ಕಿದ್ವಾಯಿ ರಸ್ತೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಬಂದರ್ ರಸ್ತೆ 5ನೇ ಕ್ರಾಸ್ ನಿವಾಸಿ, ವಿದೇಶದಲ್ಲಿ ಸೇಲ್ಸ್‌ಮನ್ ಆಗಿ ಕೆಲಸ ಮಾಡುತ್ತಿದ್ದ ಮಹ್ಮದ್ ರಿಜ್ವಾನ್ (34) ಬಂಧಿತ ಆರೋಪಿ.
ಆರೋಪಿಯು ಯಾವುದೇ ಪರವಾನಗಿ ಇಲ್ಲದೆ ಮಾರಾಟ ಮಾಡುವ ಉದ್ದೇಶದಿಂದ ತನ್ನ ರಾಯಲ್ ಎನ್‌ಫೀಲ್ಡ್ ಬುಲೆಟ್ ಬೈಕ್‌ನಲ್ಲಿ ನಿಷೇಧಿತ ಮಾದಕ ವಸ್ತುವನ್ನು ಸಂಗ್ರಹಿಸಿಟ್ಟಿದ್ದ ಎನ್ನಲಾಗಿದ್ದು, ದಾಳಿ ನಡೆಸಿದ ಪೊಲೀಸರು 2 ಗ್ರಾಂ180 ಮಿ.ಗ್ರಾಂ MDMA ಹಾಗೂ KA-47/EB-8107 ನೋಂದಣಿ ಸಂಖ್ಯೆಯ ಬುಲೆಟ್ ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ.ಈ ಸಂಬಂಧ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆರೋಪಿಯನ್ನು ಬಂಧಿಸಿ, ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಂ. ಕೃಷ್ಣಮೂರ್ತಿ ಹಾಗೂ ಭಟ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ರಾನುಗುಪ್ತಾ ಅವರ ಮಾರ್ಗದರ್ಶನದಲ್ಲಿ, ಭಟ್ಕಳ ಶಹರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ದಿವಾಕರ ಪಿ.ಎಂ. ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
ಠಾಣೆಯ ಪಿಎಸ್‌ಐ ನವೀನ್ ಎಸ್. ನಾಯ್ಕ, ಸಿಬ್ಬಂದಿಗಳಾದ ದಿನೇಶ ನಾಯಕ, ದೀಪಕ ನಾಯ್ಕ, ಸುರೇಶ ಮರಾಠಿ, ಕೃಷ್ಣ ಎನ್.ಜಿ., ಮಲ್ಲಿಕಾರ್ಜುನ ಉಟಗಿ, ಕಿರಣ ಪಾಟೀಲ್, ಜಗದೀಶ ನಾಯ್ಕ, ಎಪಿಸಿ ಮಹೇಶ ಅಮಗೋತ, ಚಂದ್ರು ಮರಾಠಿ, ವಿದ್ಯಾ ಆಚಾರಿ ಹಾಗೂ ಶ್ವೇತಾ ಹೆಚ್.ಎನ್. ಅವರು ದಾಳಿಯಲ್ಲಿ ಪಾಲ್ಗೊಂಡಿದ್ದರು.ಆರೋಪಿಯನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಭಟ್ಕಳ ಶಹರ ಪೊಲೀಸ್ ಠಾಣೆಯ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಇಲಾಖೆ ಅಭಿನಂದಿಸಿದೆ.


