Thursday, October 22, 2026
HomeCrimeದೇವಸ್ಥಾನಕ್ಕೆ ಕನ್ನ: 24 ಗಂಟೆಯಲ್ಲೇ ಆರೋಪಿ ಬಂಧನ

ದೇವಸ್ಥಾನಕ್ಕೆ ಕನ್ನ: 24 ಗಂಟೆಯಲ್ಲೇ ಆರೋಪಿ ಬಂಧನ

ಭಟ್ಕಳ: ದೇವಸ್ಥಾನದ ಬಾಗಿಲಿನ ಬೀಗ ಹಾಗೂ ಕಟ್ಟಿಗೆಯ ಬಾಗಿಲು ಮುರಿದು ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಪ್ರಕರಣ ದಾಖಲಾದ 24 ಗಂಟೆಯೊಳಗೆ ಭಟ್ಕಳ ಗ್ರಾಮೀಣ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ ರೂ.1,07,300 ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಭಟ್ಕಳ ತಾಲೂಕಿನ ಬೆಳಕೆ, ಗರಡಿಹಿಲ್ಲು ಗ್ರಾಮದ ಶ್ರೀ ಭಂಟಗೊಂಡ ದೇವಸ್ಥಾನದಲ್ಲಿ ಸೆ.28ರ ರಾತ್ರಿ 10 ಗಂಟೆಯಿಂದ ಸೆ.29ರ ಬೆಳಗಿನ ಜಾವ 5 ಗಂಟೆಯ ನಡುವಿನ ಅವಧಿಯಲ್ಲಿ ಕಳ್ಳತನ ನಡೆದಿತ್ತು. ದೇವಸ್ಥಾನದ ಬಾಗಿಲಿನ ಬೀಗ ಹಾಗೂ ಕಟ್ಟಿಗೆಯ ಬಾಗಿಲು ಮುರಿದು ಒಳನುಗ್ಗಿದ್ದ ಕಳ್ಳರು ದೇವರ ಕುತ್ತಿಗೆಯಲ್ಲಿದ್ದ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ಕಳವು ಮಾಡಿದ್ದರು. ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಆರೋಪಿಯ ಪತ್ತೆಗಾಗಿ ವಿಶೇಷ ತಂಡ ರಚಿಸಿದ್ದ ಪೊಲೀಸರು, ಪ್ರಕರಣ ದಾಖಲಾದ 24 ಗಂಟೆಯೊಳಗೆ ಭಟ್ಕಳದ ತಲಹಾ ಕಾಲೋನಿ, ಹನೀಫಾಬಾದ್, ಹೆಬಳೆ ನಿವಾಸಿ ಸೈಯದ್ ಯೂನುಸ್ ಸೈಯದ್ ಅಹ್ಮದ್ (26) ಎಂಬಾತನನ್ನು ಸೆ.30ರಂದು ಬಂಧಿಸಿದ್ದಾರೆ.

ಆರೋಪಿಯಿಂದ ಅಂದಾಜು ರೂ.70,000 ಮೌಲ್ಯದ 5.340 ಗ್ರಾಂ ತೂಕದ ಬಂಗಾರದ ಸರ, ಅಂದಾಜು ರೂ.2,300 ಮೌಲ್ಯದ 20 ಗ್ರಾಂ ತೂಕದ ಬೆಳ್ಳಿಯ ಕರಿಮಣಿ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ಅಂದಾಜು ರೂ.35,000 ಮೌಲ್ಯದ ಬಜಾಜ್ ಪಲ್ಸರ್ ಮೋಟಾರ್ ಸೈಕಲ್ ಸೇರಿದಂತೆ ಒಟ್ಟು ರೂ.1,07,300 ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ.

ಈ ಕಾರ್ಯಾಚರಣೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಹಾಗೂ ಭಟ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ರಾಣು ಗುಪ್ತಾ, ಐಪಿಎಸ್ ಅವರ ಮಾರ್ಗದರ್ಶನದಲ್ಲಿ ನಡೆದಿದೆ.

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ನಿರೀಕ್ಷಕ ದಿವಾಕರ ಪಿ.ಎಂ. ಅವರ ನೇತೃತ್ವದಲ್ಲಿ ತನಿಖಾಧಿಕಾರಿ ಹಾಗೂ ಪೊಲೀಸ್ ಉಪನಿರೀಕ್ಷಕ ಭರಮಪ್ಪ ಬೆಳಗಲಿ, ಪೊಲೀಸ್ ಉಪನಿರೀಕ್ಷಕ ಮಲ್ಲಿಕಾರ್ಜುನಯ್ಯ ಕೂರಾಣಿ ಹಾಗೂ ಅಪರಾಧ ವಿಭಾಗದ ಸಿಬ್ಬಂದಿಗಳಾದ ಮಂಜುನಾಥ ಗೊಂಡ, ಈರಣ್ಣ ಪೂಜೇರಿ, ಬಾಗಪ್ಪ ಕಡಕಲ್ ಹಾಗೂ ನಿಂಗನಗೌಡ ಪಾಟೀಲ್ ಅವರು ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಪ್ರಕರಣವನ್ನು ಕ್ಷಿಪ್ರವಾಗಿ ಪತ್ತೆಹಚ್ಚಿ ಆರೋಪಿಯನ್ನು ಬಂಧಿಸಿದ ಅಧಿಕಾರಿ ಹಾಗೂ ಸಿಬ್ಬಂದಿಯ ಕಾರ್ಯವನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share