Monday, September 7, 2026
Join WhatsApp Group
HomeLocal Newsವ್ಹೀಲಿಂಗ್ ಸ್ಟಂಟ್; ಇನ್‌ಸ್ಟಾಗ್ರಾಂ ಖಾತೆದಾರನ ವಿರುದ್ಧ ಪ್ರಕರಣ

ವ್ಹೀಲಿಂಗ್ ಸ್ಟಂಟ್; ಇನ್‌ಸ್ಟಾಗ್ರಾಂ ಖಾತೆದಾರನ ವಿರುದ್ಧ ಪ್ರಕರಣ

ಭಟ್ಕಳ: ಸಾರ್ವಜನಿಕ ರಸ್ತೆಯಲ್ಲಿ ಅಪಾಯಕಾರಿಯಾಗಿ ವ್ಹೀಲಿಂಗ್ ಮಾಡಿ ಅದರ ವಿಡಿಯೋವನ್ನು ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್ ಮಾಡಿ ಯುವಕರನ್ನು ಇಂತಹ ಕೃತ್ಯಕ್ಕೆ ಪ್ರಚೋದನೆ ನೀಡಿದ ಆರೋಪದಡಿ ಅಪರಿಚಿತ ಇನ್‌ಸ್ಟಾಗ್ರಾಂ ಖಾತೆದಾರನ ವಿರುದ್ಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಟ್ಕಳ ನಗರ ಪೊಲೀಸ್ ಠಾಣೆಯ ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ಸಿಬ್ಬಂದಿಯಾಗಿರುವ ಪೊಲೀಸ್ ಕಾನ್ಸ್‌ಟೇಬಲ್ ಸಚಿನ್ ಯಶವಂತರಾವ್ ಪವಾರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

ಜೂನ್ 25ರಂದು ಸಾಮಾಜಿಕ ಜಾಲತಾಣಗಳ ಪರಿಶೀಲನೆ ವೇಳೆ akkihotpiston ಹೆಸರಿನ ಖಾತೆಯಲ್ಲಿ ಭಟ್ಕಳದ ವಿವಿಧ ಸಾರ್ವಜನಿಕ ರಸ್ತೆಗಳಲ್ಲಿ ದ್ವಿಚಕ್ರ ವಾಹನಗಳ ಮೂಲಕ ಅಪಾಯಕಾರಿಯಾಗಿ ವ್ಹೀಲಿಂಗ್ ನಡೆಸಿದ ವಿಡಿಯೋಗಳನ್ನು ಅಪ್‌ಲೋಡ್ ಮಾಡಿರುವುದು ಪತ್ತೆಯಾಗಿದೆ.

ಈ ವಿಡಿಯೋಗಳು ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುವುದರ ಜೊತೆಗೆ, ಯುವಕರನ್ನು ಇಂತಹ ಅಪಾಯಕಾರಿ ಸಾಹಸಗಳಿಗೆ ಪ್ರೇರೇಪಿಸುವಂತಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share