Thursday, October 22, 2026
HomeLocal Newsಶಾಸಕ ಭೀಮಣ್ಣ ನಾಯ್ಕ ಹೇಳಿಕೆ ‘ಭೂತದ ಬಾಯಲ್ಲಿ ಭಗವದ್ಗೀತೆ’ಯಂತಿದೆ

ಶಾಸಕ ಭೀಮಣ್ಣ ನಾಯ್ಕ ಹೇಳಿಕೆ ‘ಭೂತದ ಬಾಯಲ್ಲಿ ಭಗವದ್ಗೀತೆ’ಯಂತಿದೆ

ಶಿರಸಿ: ಶಿರಸಿ–ಸಿದ್ದಾಪುರ ಕ್ಷೇತ್ರದ ಶಾಸಕ ಬಿಮಣ್ಣ ನಾಯ್ಕ ಅವರ ಹೇಳಿಕೆ ‘ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಾಗಿದೆ. ಹೇಳುವುದು ಒಂದು, ಮಾಡುವುದು ಇನ್ನೊಂದು, ನಡೆಯುವುದು ಮತ್ತೊಂದು ಎಂಬಂತಾಗಿದೆ ಎಂದು ಜಾನ್ಮನೆ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಾರಾಯಣ ಹೆಗಡೆ ಟೀಕಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಸರ್ಕಾರದ 13-08-2026ರ ಆದೇಶದ ಬಗ್ಗೆ ಜನತೆಗೆ ಸ್ಪಷ್ಟನೆ ನೀಡುವ ಬದಲು ಸಂಸದರು ಪಂಚಾಯಿತಿಯಲ್ಲಿ ಮಾತನಾಡುವುದನ್ನು ಬಿಟ್ಟು ಸಂಸತ್‌ನಲ್ಲಿ ಮಾತನಾಡಲಿ ಎನ್ನುವುದು ಶಾಸಕರಿಗೆ ಶೋಭೆ ತರುವುದಿಲ್ಲ ಎಂದಿದ್ದಾರೆ.

ಒಂದೇ ಒಂದು ಮನೆ ತೆರವು ಮಾಡಿದರೂ ರಾಜೀನಾಮೆ ನೀಡುತ್ತೇನೆ, ಸಂಸದರು ರಾಜೀನಾಮೆ ಕೊಡುತ್ತಾರಾ ಎಂದು ಸವಾಲು ಹಾಕಿರುವುದು ಕೂಡ ಬಾಲಿಶ ಹೇಳಿಕೆಯಾಗಿದೆ ಎಂದು ಟೀಕಿಸಿದ್ದಾರೆ.

ತಮ್ಮದೇ ಸರ್ಕಾರದ ಆದೇಶದಿಂದ ಜನರಿಗೆ ಸಮಸ್ಯೆಯಾಗಿದ್ದರೆ ಅದಕ್ಕೆ ಸಂಸದರು ಏಕೆ ರಾಜೀನಾಮೆ ನೀಡಬೇಕು? ಇ-ಸ್ವತ್ತು 2.0 ಕುರಿತು ಸದನದಲ್ಲಿ ತಿದ್ದುಪಡಿ ಮಾಡಬೇಕಾದ ವಿಚಾರ ಸರ್ಕಾರ ಶಾಸಕರ ಗಮನಕ್ಕೆ ತಂದಿಲ್ಲವೇ ಎಂದು ಪ್ರಶ್ನಿಸಿರುವ ಅವರು, ಜನರಿಗೆ ಉತ್ತರಿಸುವ ಬದಲು ಮತ್ತೊಬ್ಬ ಜನಪ್ರತಿನಿಧಿಯ ಮೇಲೆ ಸವಾಲು ಹಾಕುವುದು ಸರಿಯಲ್ಲ ಎಂದಿದ್ದಾರೆ.

ಶಾಸಕರಾಗಿ ಸುಮಾರು ಮೂರು ಮುಕ್ಕಾಲು ವರ್ಷ ಕಳೆದರೂ ಕ್ಷೇತ್ರದ ಹಲವು ಸಮಸ್ಯೆಗಳು ಬಗೆಹರಿದಿಲ್ಲ. ಹಿಂದಿನ ಸರ್ಕಾರ ಮಂಜೂರು ಮಾಡಿ ಕಾಮಗಾರಿ ಆರಂಭಿಸಿದ್ದ ಹಲವು ಕಾಮಗಾರಿಗಳು ಮೂಲ ಮಂಜೂರಿಯಂತೆ ಪೂರ್ಣಗೊಂಡು ಸಾರ್ವಜನಿಕ ಬಳಕೆಗೆ ಇನ್ನೂ ಸಿದ್ಧವಾಗಿಲ್ಲ. ಬಡವರಿಗೆ ಹಿಂದಿನ ಬಿಜೆಪಿ ಸರ್ಕಾರ ಮಂಜೂರು ಮಾಡಿದ್ದ ಆಶ್ರಯ ಮನೆಗಳನ್ನು ಹೊರತುಪಡಿಸಿ ಪ್ರಸ್ತುತ ಸರ್ಕಾರ ಒಂದೇ ಒಂದು ಮನೆ ಮಂಜೂರು ಮಾಡಿಲ್ಲ. ಈಗಾಗಲೇ ಮಂಜೂರಾದ ಮನೆಗಳಿಗೂ ಹಣ ಬಿಡುಗಡೆಯಾಗಿಲ್ಲ ಎಂದು ಆರೋಪಿಸಿದ್ದಾರೆ.

ವಸತಿ ಸಚಿವರನ್ನು ಭೇಟಿ ಮಾಡಿ ಮನೆಗಳ ಮಂಜೂರು ಹಾಗೂ ಅನುದಾನ ಬಿಡುಗಡೆಗೆ ಮನವಿ ಮಾಡಿದ್ದು, ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕರು ಹೇಳಿ ಹಲವು ತಿಂಗಳು ಕಳೆದರೂ ಈವರೆಗೆ ಮನೆ ಮಂಜೂರಾಗಿದೆಯೇ, ಹಣ ಬಿಡುಗಡೆಯಾಗಿದೆಯೇ ಎಂಬುದನ್ನು ಜನತೆಗೆ ತಿಳಿಸಲಿ ಎಂದು ಆಗ್ರಹಿಸಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರ ಮಂಜೂರು ಮಾಡಿದ್ದ ಹಲವು ಅತ್ಯವಶ್ಯಕ ಅಭಿವೃದ್ಧಿ ಕಾಮಗಾರಿಗಳನ್ನು ತಡೆಹಿಡಿಯಲಾಗಿದೆ ಎಂದು ಆರೋಪಿಸಿರುವ ನಾರಾಯಣ ಹೆಗಡೆ, ಮೊದಲು ತಮ್ಮ ಆಡಳಿತ ವ್ಯವಸ್ಥೆಯನ್ನು ಸುಧಾರಿಸಿಕೊಂಡು ಜನರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಬೇಕು ಎಂದು ಆಗ್ರಹಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share