Saturday, May 30, 2026
HomeUncategorizedಸೇವೆಯ ಮೂಲಕ ಹುಟ್ಟುಹಬ್ಬ ಸಂಭ್ರಮಿಸಿದ ರೈತ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ

ಸೇವೆಯ ಮೂಲಕ ಹುಟ್ಟುಹಬ್ಬ ಸಂಭ್ರಮಿಸಿದ ರೈತ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ

ವೃದ್ಧಾಶ್ರಮದಲ್ಲಿ ಹುಟ್ಟುಹಬ್ಬ ಆಚರಣೆ: ಆಹಾರ ಕಿಟ್ ವಿತರಿಸಿ ಮಾನವೀಯತೆ ಮೆರೆದ ಅನುಪಮಾ

ಮೈಸೂರು: ಪಿರಿಯಾಪಟ್ಟಣ ತಾಲೂಕಿನ ಸಮಾಜ ಸೇವಕಿ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಮಹಿಳಾ ಜಿಲ್ಲಾಧ್ಯಕ್ಷರಾದ ಅನುಪಮಾ ಎಲ್ ಆರ್ಯ ಅವರು ಸಮೀಪದ ಕೂಡಿಗೆಯ ವೃದ್ಧಾಶ್ರಮದಲ್ಲಿ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡರು.

ಈ ಸಂದರ್ಭದಲ್ಲಿ ವೃದ್ಧಾಶ್ರಮದ ಹಿರಿಯರ ಆಶೀರ್ವಾದ ಪಡೆದ ಅವರು, ಅಲ್ಲಿನ ನಿವಾಸಿಗಳಿಗೆ ಹಣ್ಣು ಹಂಪಲು ಹಾಗೂ ಆಹಾರ ಕಿಟ್‌ಗಳನ್ನು ವಿತರಿಸಿದರು. ಬಳಿಕ ತಮ್ಮ ಖರ್ಚಿನಲ್ಲಿ ಊಟದ ವ್ಯವಸ್ಥೆ ಮಾಡಿಸಿ, ಎಲ್ಲರಿಗೂ ಸತ್ಕಾರವಾಗಿ ಊಟ ಬಡಿಸಿದರು.

ಈ ವೇಳೆ ಮಾತನಾಡಿದ ಅನುಪಮಾ ಎಲ್ ಆರ್ಯ ಅವರು, “ಸಾರ್ವಜನಿಕರ ಹಿತಾಸಕ್ತಿ ಕಾಯುವ ಮೂಲಕ ಸಮಾಜ ಸೇವೆಯಲ್ಲಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ಕೆಲವು ಮಂದಿ ನನ್ನ ಮೇಲೆ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದರೂ, ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಜನರ ಕಷ್ಟ-ಸುಖಗಳಿಗೆ ಸ್ಪಂದಿಸುವ ಮೂಲಕ ನಿರಂತರವಾಗಿ ಸೇವೆ ಸಲ್ಲಿಸುತ್ತೇನೆ. ಎಲ್ಲರ ಆಶೀರ್ವಾದ ನನ್ನ ಮೇಲೆ ಇರಲಿ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅನುಪಮಾ ಅಭಿಮಾನಿ ಬಳಗದ ನಿತಿನ್, ವಸಂತ, ಪಾಪಣ್ಣ, ಮಾದೇಶ, ಪುಂಡು, ಸಾಗರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share