Monday, September 7, 2026
Join WhatsApp Group
HomeLocal Newsಎಸ್‌ಐಆರ್‌ ಕುರಿತು ಬಿಜೆಪಿ ಸಭೆ

ಎಸ್‌ಐಆರ್‌ ಕುರಿತು ಬಿಜೆಪಿ ಸಭೆ

ಬೆಂಗಳೂರು: ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಸಭೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್. ನಾಯ್ಕ್ ಪಾಲ್ಗೊಂಡರು.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯ ಉಸ್ತುವಾರಿ ಡಾ. ರಾಧಾ ಮೋಹನ್ ದಾಸ್ ಅಗರ್ವಾಲ್ ಅವರ ಉಪಸ್ಥಿತಿಯಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಎಸ್‌ಐಆರ್‌ ಪ್ರಕ್ರಿಯೆಯ ಕುರಿತು ಪಕ್ಷದ ಪದಾಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. ಮತದಾರರ ಪಟ್ಟಿಯನ್ನು ಶುದ್ಧೀಕರಿಸಿ, ಅರ್ಹರೆಲ್ಲರಿಗೂ ಮತದಾನದ ಹಕ್ಕು ದೊರೆಯುವಂತೆ ಮಾಡುವುದೇ ಈ ಪ್ರಕ್ರಿಯೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಲಾಯಿತು.

 ಅಲ್ಲದೇ, ಎಸ್‌ಐಆರ್‌ ಪ್ರಕ್ರಿಯೆಯಿಂದ ಯಾವುದೇ ಅರ್ಹ ನಾಗರಿಕರು ಮತದಾರರ ಪಟ್ಟಿಯಿಂದ ಹೊರಗುಳಿಯುವುದಿಲ್ಲ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡುವಂತೆ ಕರೆ ನೀಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್‌, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ, ರಾಜ್ಯ ಕಾರ್ಯದರ್ಶಿಗಳಾದ ತಮ್ಮೇಶ್‌ ಗೌಡ, ವಿನಯ್‌ ಬಿದರೆ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share