Monday, September 7, 2026
Join WhatsApp Group
HomeLocal Newsಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಜೂ.15ರಂದು ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಜೂ.15ರಂದು ಬಿಜೆಪಿ ಪ್ರತಿಭಟನೆ

ಯಲ್ಲಾಪುರ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ, ಅಭಿವೃದ್ಧಿ ಕಾಮಗಾರಿಗಳ ವಿಳಂಬ ಹಾಗೂ ಸಾರ್ವಜನಿಕ ಸಮಸ್ಯೆಗಳ ವಿರುದ್ಧ ಭಾರತೀಯ ಜನತಾ ಪಾರ್ಟಿ ಯಲ್ಲಾಪುರ ಮಂಡಳ ವತಿಯಿಂದ ಜೂನ್ 15ರಂದು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಬಿಜೆಪಿ ಮಂಡಳ ಪ್ರಕಟಣೆ ನೀಡಿದ್ದು, G+2 ವಸತಿ ಯೋಜನೆಯ ಫಲಾನುಭವಿಗಳಿಗೆ ತಕ್ಷಣ ಮನೆಗಳನ್ನು ಹಂಚಿಕೆ ಮಾಡಬೇಕು ಹಾಗೂ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಬೇಕು.

ಯಲ್ಲಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿ ಇರುವ ಸ್ತ್ರೀರೋಗ ತಜ್ಞರ ಹುದ್ದೆಯನ್ನು ಕೂಡಲೇ ಭರ್ತಿ ಮಾಡಬೇಕು. ಜೊತೆಗೆ ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರನ್ನು ನೇಮಿಸಿ ಆರೋಗ್ಯ ಸೇವೆ ಸುಧಾರಿಸಬೇಕು.

ತಾಲೂಕಿನ ಮಳೆಮಾಪನ ಕೇಂದ್ರಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಿ, ಅವುಗಳಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸಬೇಕು. ವನ್ಯಪ್ರಾಣಿಗಳ ದಾಳಿಯಿಂದ ಹಾನಿಗೊಳಗಾದ ಎಲ್ಲ ಸಂತ್ರಸ್ತರಿಗೆ ಸೂಕ್ತ ಪರಿಹಾರ ವಿತರಿಸಬೇಕು ಎಂಬ ಬೇಡಿಕೆಯನ್ನೂ ಬಿಜೆಪಿ ಮುಂದಿಟ್ಟಿದೆ.

ಕಣ್ಣಿಗೇರಿ, ಕಿರವತ್ತಿ ಹಾಗೂ ಮದನೂರು ಭಾಗಗಳಲ್ಲಿ ನಡೆಯುತ್ತಿರುವ ಕೆರೆ ತುಂಬಿಸುವ ಕಾಮಗಾರಿಗಳ ಕುರಿತು ಸಾರ್ವಜನಿಕರಲ್ಲಿ ಗೊಂದಲವಿದ್ದು, ಕಾಮಗಾರಿಯ ಸಂಪೂರ್ಣ ವಿವರವನ್ನು ಬಹಿರಂಗಪಡಿಸಬೇಕು.

ಆಡಳಿತ ವ್ಯವಸ್ಥೆಯಲ್ಲಿ ಅಧಿಕಾರಿಗಳ ಕೊರತೆ, 15ನೇ ಹಣಕಾಸು ಯೋಜನೆಯ ಅನುಷ್ಠಾನದಲ್ಲಿನ ವಿಫಲತೆ ಹಾಗೂ ಗ್ರಾಮೀಣ ವಸತಿ ಯೋಜನೆಗಳ ನಿರ್ಲಕ್ಷ್ಯದ ವಿರುದ್ಧವೂ ಪ್ರತಿಭಟನೆಯಲ್ಲಿ ಧ್ವನಿ ಎತ್ತಲಾಗುವುದು ಎಂದು ತಿಳಿಸಲಾಗಿದೆ.

ಸಂಬಂಧಪಟ್ಟ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಸಮರ್ಪಕ ಮಾಹಿತಿ ನೀಡುವವರೆಗೆ ಪ್ರತಿಭಟನೆ ಮುಂದುವರಿಯಲಿದೆ ಎಂದು ಬಿಜೆಪಿ ಎಚ್ಚರಿಕೆ ನೀಡಿದೆ.

ಬಿಜೆಪಿ ಯಲ್ಲಾಪುರ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ, ಪ್ರಧಾನ ಕಾರ್ಯದರ್ಶಿಗಳಾದ ನಟರಾಜ ಗೌಡ ಹಾಗೂ ರವಿ ಕೈಟ್ಕರ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share