ಯಲ್ಲಾಪುರ: ಪಟ್ಟಣದ ರವೀಂದ್ರನಗರದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಹಾಗೂ ನಾಯಕತ್ವವನ್ನು ಒಪ್ಪಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್ ಅವರು ಪಕ್ಷಕ್ಕೆ ಸೇರ್ಪಡೆಗೊಂಡ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದ ಶಾಲು ಹೊದಿಸಿ ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಸುರೇಶ ಕಟ್ಟದಮನಿ, ಪ್ರತಾಪ ಮೂರ್ತಿ, ಯಮನಪ್ಪ ಭೋವಿವಡ್ಡರ್, ಬಸವರಾಜ ಬೋವಿವಡ್ಡರ್, ನಾಗಪ್ಪ ಬಾರಕೇರ, ಶಿವಪ್ಪ ಭೋವಿವಡ್ಡರ್, ಗೌರಮ್ಮ ಬಳಗಾರ ಹಾಗೂ ದ್ಯಾಮವ್ವ ಜೋಗಿ ಸೇರಿದಂತೆ ಹಲವರು ಕಾಂಗ್ರೆಸ್ ಸೇರ್ಪಡೆಗೊಂಡರು.
ಸೇರ್ಪಡೆ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿ.ಎಸ್. ಭಟ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿಜಯ ಮಿರಾಶಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎನ್.ಕೆ. ಭಟ್, ಗ್ಯಾರಂಟಿ ಯೋಜನೆ ಸಮಿತಿಯ ತಾಲೂಕು ಅಧ್ಯಕ್ಷ ಉಲ್ಲಾಸ ಶಾನಭಾಗ, ಪ್ರಮುಖರಾದ ಎಂ.ಡಿ. ಮುಲ್ಲಾ, ಜಗನ್ನಾಥ ರೇವಣಕರ, ಕುಮುದಾ ಸಾಣೆ, ಮಾರುತಿ ಭೋವಿವಡ್ಡರ್, ಮಹೇಶ ನಾಯ್ಕ, ಶರತ್ ಹಾಗೂ ಶಂಕರ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.


