Friday, July 24, 2026
Join WhatsApp Group
HomeLocal Newsಬಿಜೆಪಿಗೆ ಗುಡ್‌ಬೈ; ಕಾಂಗ್ರೆಸ್‌ಗೆ ಸೇರ್ಪಡೆಯಾದ ಕರಿಯಮ್ಮಗುಂಡಿ ಕಾರ್ಯಕರ್ತರು

ಬಿಜೆಪಿಗೆ ಗುಡ್‌ಬೈ; ಕಾಂಗ್ರೆಸ್‌ಗೆ ಸೇರ್ಪಡೆಯಾದ ಕರಿಯಮ್ಮಗುಂಡಿ ಕಾರ್ಯಕರ್ತರು

ಯಲ್ಲಾಪುರ: ಕಿರವತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಿಯಮ್ಮಗುಂಡಿ ಗೌಳಿವಾಡದ ಭಾರತೀಯ ಜನತಾ ಪಕ್ಷದ ಹಲವು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿಜಯ ಮಿರಾಶಿ ಅವರು ನೂತನ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದ ಶಾಲು ಹೊದಿಸಿ ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡರು.

ಗಂಗಾರಾಮ ಕೊಕರೆ, ಗಂಗಾರಾಮ ದೊಳು ಕೊಕರೆ, ಗಂಗಾರಾಮ ಬರಗಡೆ, ಬಾಗು ಕೊಕರೆ, ಸೊನು ಕೊಕರೆ, ಚಾಂಗೂ ಬರಗಡೆ, ಕೊಂಡು ಕೊಕರೆ, ಭರತ ಬರಗಡೆ, ಬಮ್ಮು ಬರಗಡೆ, ರಾಮು ಕೊಕರೆ, ಜಗ್ಗು ಕೊಕರೆ, ವಾಘು ಕೊಕರೆ ಹಾಗೂ ಬಬ್ಬನ ಬರಗಡೆ ಸೇರಿದಂತೆ ಹಲವು ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ನಾಯಕತ್ವವನ್ನು ಮೆಚ್ಚಿ ಪಕ್ಷ ಸೇರ್ಪಡೆಯಾದರು.

ಬಳಿಕ ನೂತನವಾಗಿ ಸೇರ್ಪಡೆಯಾದ ಕಾರ್ಯಕರ್ತರು ಶಾಸಕ ಶಿವರಾಮ ಹೆಬ್ಬಾರ್ ಅವರನ್ನು ಭೇಟಿ ಮಾಡಿ ಪಕ್ಷ ಸಂಘಟನೆ, ಕ್ಷೇತ್ರದ ಅಭಿವೃದ್ಧಿ ಹಾಗೂ ಮುಂದಿನ ರಾಜಕೀಯ ಚಟುವಟಿಕೆಗಳ ಕುರಿತು ಚರ್ಚಿಸಿ ಅಗತ್ಯ ಸಲಹೆ ಮತ್ತು ಮಾರ್ಗದರ್ಶನ ಪಡೆದರು.

ಕಾಂಗ್ರೆಸ್ ಪಕ್ಷ ಸೇರ್ಪಡೆಯಿಂದ ಕರಿಯಮ್ಮಗುಂಡಿ ಭಾಗದಲ್ಲಿ ಪಕ್ಷ ಸಂಘಟನೆ ಮತ್ತಷ್ಟು ಬಲಗೊಳ್ಳಲಿದೆ ಎಂದು ಪಕ್ಷದ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share