Saturday, June 13, 2026
HomeLocal Newsಬಿಜೆಪಿ ಮಂಡಲ ಕಾರ್ಯಕಾರಿಣಿ ಸಭೆ

ಬಿಜೆಪಿ ಮಂಡಲ ಕಾರ್ಯಕಾರಿಣಿ ಸಭೆ

ಯಲ್ಲಾಪುರ: ಭಾರತೀಯ ಜನತಾ ಪಾರ್ಟಿ ಯಲ್ಲಾಪುರ ಮಂಡಳದ ಕಾರ್ಯಕಾರಿಣಿ ಸಭೆಯು ಭಾನುವಾರ ಯಲ್ಲಾಪುರದ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು.

ಸಭೆಯಲ್ಲಿ ಜೂನ್ ತಿಂಗಳ ಪಕ್ಷದ ಸಂಘಟನಾ ಚಟುವಟಿಕೆಗಳು, ಕಾರ್ಯಕ್ರಮಗಳು ಹಾಗೂ ವಿವಿಧ ಹಂತಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಚರ್ಚೆ ನಡೆಸಲಾಯಿತು. ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಂಡಲ ಮಟ್ಟದ ಯೋಜನೆಗಳು ಮತ್ತು ಮುಂದಿನ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆಯೂ ಪದಾಧಿಕಾರಿಗಳು ಅಭಿಪ್ರಾಯ ಹಂಚಿಕೊಂಡರು.

ಸಭೆಯ ಬಳಿಕ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕೋಟೆಕರಿಯವ್ವ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರಲ್ಲದೆ, ದೇವಸ್ಥಾನದ ಆವರಣದಲ್ಲಿ ವೃಕ್ಷಾರೋಪಣ ಕಾರ್ಯಕ್ರಮ ನಡೆಸುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು.

ಮಂಡಲ ಅಧ್ಯಕ್ಷ ಪ್ರಸಾದ ಹೆಗಡೆ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಜಿಲ್ಲಾ ಪದಾಧಿಕಾರಿಗಳಾದ ಚಂದ್ರಕಲಾ ಭಟ್ಟ, ಉಮೇಶ್ ಭಾಗ್ವತ, ವೆಂಕಟರಮಣ ಬೆಳ್ಳಿ, ವಿ.ಎನ್. ಭಟ್ಟ (ಏಕಾನ) ಸೇರಿದಂತೆ ಮಂಡಲ ಪದಾಧಿಕಾರಿಗಳಾದ ಶ್ರುತಿ ಹೆಗಡೆ, ಜಿ.ಆರ್. ಭಾಗ್ವತ, ವಿನೀಶ್ ಭಟ್ಟ, ಸೋಮೇಶ್ವರ ನಾಯ್ಕ, ಗಣೇಶ ಪಾಟಣಕರ, ಇಂದಿರಾ ಭಟ್ಟ, ಪ್ರದೀಪ್‌ ಯಲ್ಲಾಪುರಕರ್‌ ಹಾಗೂ ಪಕ್ಷದ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share