Thursday, October 22, 2026
HomeLocal Newsಶಿರಸಿ | ಕ್ರೀಡಾಕೂಟದಲ್ಲಿ ಚಂದನ ವಿದ್ಯಾರ್ಥಿಗಳ ಸಾಧನೆ

ಶಿರಸಿ | ಕ್ರೀಡಾಕೂಟದಲ್ಲಿ ಚಂದನ ವಿದ್ಯಾರ್ಥಿಗಳ ಸಾಧನೆ

ಶಿರಸಿ: ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಂದನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ.

ಶಿರಸಿಯಲ್ಲಿ ನಡೆದ 17 ವರ್ಷ ವಯೋಮಿತಿಯೊಳಗಿನ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಬಹುಮಾನ ಗಳಿಸುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

10ನೇ ತರಗತಿಯ ಅಕ್ಷರಾ ನಾಯ್ಕ 60 ಕೆಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 9ನೇ ತರಗತಿಯ ಸಾಧನಾ ಗೌಡ ಟ್ರಿಪಲ್ ಜಂಪ್ ಹಾಗೂ 44 ಕೆಜಿ ವಿಭಾಗದ ಕರಾಟೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದು, ಜಾವೆಲಿನ್ ಥ್ರೋನಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

10ನೇ ತರಗತಿಯ ಸಂಪ್ರೀತ್ ಮೊಗೇರ 62 ಕೆಜಿ ವಿಭಾಗದ ಕರಾಟೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. 10ನೇ ತರಗತಿಯ ನವೀನ ಪೂಜಾರಿ ಜಾವೆಲಿನ್ ಥ್ರೋನಲ್ಲಿ ತೃತೀಯ ಸ್ಥಾನ ಗಳಿಸಿದರೆ, 9ನೇ ತರಗತಿಯ ಕೃತಿ ಉಂಚಳ್ಳಿ ಚಕ್ರ ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಚಂದನ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಪಾಲಕರು ಅಭಿನಂದನೆ ಸಲ್ಲಿಸಿದ್ದಾರೆ. ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲೂ ಉತ್ತಮ ಪ್ರದರ್ಶನ ನೀಡುವಂತೆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share