ಕಾರವಾರ: ಬಾಲ ಕಾರ್ಮಿಕ ಪದ್ದತಿಯಿಂದ ಮಕ್ಕಳ ಭೌತಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತಗೊಳ್ಳಲಿದ್ದು, ಮಕ್ಕಳಿಗೆ ಆಟ ಪಾಠದ ಜೊತೆ ಉತ್ತಮ ಆರೋಗ್ಯ ಹಾಗೂ ಸುರಕ್ಷಿತ ಬಾಲ್ಯ ಒದಗಿಸುವ ಉದ್ದೇಶದಿಂದ ಬಾಲ ಕಾರ್ಮಿಕ ಪದ್ದತಿ ನಿಮೂಲನೆ ಮಾಡುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಮ್ ಹೇಳಿದರು.
ಅವರು ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ (ರಿ), ಸೆಂಟ್ ಜೋಸೆಫ್ಸ್ ಪದವಿ ಪೂರ್ವ ಮಹಾ ವಿದ್ಯಾಲಯ ಕಾಜುಭಾಗ ಇವರ ಸಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ, ಬಾಲ್ಯ ವಿವಾಹ ತಡೆ, ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜು ಮಕ್ಕಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತುಗಳ ಜಾಲ ಹರಡುತ್ತಿದ್ದು. ವಿದ್ಯಾರ್ಥಿಗಳು ಇಂತಹ ದುಶ್ಚಟಗಳಿಗೆ ಒಳಗಾಗದೇ ಉತ್ತಮ ಭವಿಷ್ಯ ರೂಪಿಸಕೊಳ್ಳಬೇಕು ಎಂದರು
ಜಿಲ್ಲಾ ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ ಮಾತನಾಡಿ, ಜಿಲ್ಲೆಯಲ್ಲಿ ಬಾಲಕಾರ್ಮಿಕ ಯೋಜನಾ ಸೊಸೈಟಿಯಿಂದ ಇದುವರೆಗೆ ಒಟ್ಟು 32 ಮಕ್ಕಳನ್ನು (4 ಬಾಲ ಕಾರ್ಮಿಕರು ಮತ್ತು 28 ಕಿಶೋರ ಕಾರ್ಮಿಕರು) ರಕ್ಷಿಸಲಾಗಿದೆ. ಇವರಲ್ಲಿ 16 ಮಕ್ಕಳು ಅಪಾಯಕಾರಿ ಹಾಗೂ 16 ಮಕ್ಕಳು ಅಪಾಯಕಾರಿ ಅಲ್ಲದ ಉದ್ದಿಮೆಗಳಲ್ಲಿ ಕೆಲಸ ಮಾಡುತ್ತಿದ್ದರು.
ಪೊಲೀಸ್ ಇಲಾಖೆಯಿಂದ 5 ಈIಖ ದಾಖಲಾಗಿದ್ದು, 23 ಪ್ರಕರಣಗಳನ್ನು ನ್ಯಾಯಾಲಯದಲ್ಲಿ ದಾಖಲಿಸಲಾಗಿದೆ. ಈಗಾಗಲೇ 16 ಪ್ರಕರಣಗಳು ಮುಕ್ತಾಯಗೊಂಡು, ಮಾಲೀಕರಿಗೆ ಒಟ್ಟು 3.14.000 ರೂ ದಂಡ ವಿಧಿಸಲಾಗಿದೆ. ಉಳಿದ 7 ಪ್ರಕರಣಗಳು ವಿಚಾರಣಾ ಹಂತದಲ್ಲಿ ಇದೆ ಎಂದರು.
ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಕಾಯ್ದೆ ಕುರಿತು ಕಾರ್ಮಿಕ ನಿರೀಕ್ಷಕ ಡಿ.ಎಮ್. ವೆಂಕಟೇಶಬಾಬು ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಚುನಾವಣಾ ಶಾಖೆ ತಹಶೀಲ್ದಾರ ಪ್ರಮೋದ ನಾಯ್ಕ, ಪೊಲೀಸ್ ನಿರೀಕ್ಷಕಿ ಜಯಶ್ರೀ ಮಾನೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ.ಎನ್, ಸೆಂಟ್ ಜೋಸೆಫ್ಸ್ ಪದವಿ ಪೂರ್ವ ಮಹಾ ವಿದ್ಯಾಲಯದ ಪ್ರಾಂಶುಪಾಲ ರೆ.ಡಾ.ಸ್ಟಾö್ಯನಿ ಪಿಂಟೊ ಯಲ್ಲಾಪುರ ಕಾರ್ಮಿಕ ಅಧಿಕಾರಿ ವೀಣಾ ಮಾಸ್ತಿ ಹಾಗೂ ಕಾರ್ಮಿಕ ಇಲಾಖೆ ಸಿಬ್ಬಂಧಿಗಳು ಮತ್ತಿತರರು ಇದ್ದರು.