ಬನವಾಸಿ: ಹಾವು ಕಡಿತದಿಂದ ಆರನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ದಾರುಣ ಘಟನೆ ಬನವಾಸಿ ಹೋಬಳಿ ವ್ಯಾಪ್ತಿಯ ಸಹಸ್ರಳ್ಳಿ ಗ್ರಾಮದಲ್ಲಿ ಮಂಗಳವಾರ ಬೆಳಗಿನ ಜಾವ ಸಂಭವಿಸಿದೆ.
ಮೃತ ವಿದ್ಯಾರ್ಥಿಯನ್ನು ಮಿಥುನ ನಾಯ್ಕ ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಯ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಬಳಿಕ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚಿಸಿದ ಶಾಸಕರು, ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳು ಹಾಗೂ ಸೂಕ್ತ ಪರಿಹಾರ ದೊರಕಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ವಿದ್ಯಾರ್ಥಿಯ ಅಕಾಲಿಕ ನಿಧನದಿಂದ ಸಹಸ್ರಳ್ಳಿ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.