Friday, July 24, 2026
Join WhatsApp Group
HomeStateರಾಜ್ಯದ ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು

ರಾಜ್ಯದ ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಭಾನುವಾರ ಶಿವಮೊಗ್ಗದ ವಿಮಾನ ನಿಲ್ದಾಣ ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30 ಜನರನ್ನು ವಾಪಸ್ ಕರೆತರಲಾಗುವುದು ಎಂದು ಹೇಳಿದರಲ್ಲದೆ, ದುಬೈ ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದರು.

ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು. ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರಲು ವ್ಯವಸ್ಥೆ ಮಾಡಲಾಗುವುದು. ವಿಧಾನ ಪರಿಷತ್ ಸದಸ್ಯ ಭೋಜೇಗೌಡರು ದುಬೈದಲ್ಲಿದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ ಹೋಟೆಲಿನಲ್ಲಿ ಸುರಕ್ಷಿತವಾಗಿರುವುದಾಗಿ ಹೇಳಿದರು ಎಂದರು.

ಅಮೆರಿಕಾ ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕಾ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುವುದಾಗಿ ತಿಳಿಸಿದರು.

ಏಪ್ರಿಲ್ ನಲ್ಲಿ ವಿದ್ಯುತ್ ದರ ಏರಿಕೆಯ ಪ್ರಸ್ತಾಪದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸದ್ಯಕ್ಕೆ ಸರ್ಕಾರದ ಮುಂದೆ ಆ ಪ್ರಸ್ತಾಪವಿಲ್ಲ ಎಂದು ಸ್ಪಷ್ಟಪಡಿಸಿದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share