Friday, March 13, 2026
HomeLocal Newsಫೆ. 22ಕ್ಕೆ ಸಿಎಂ ಸಿದ್ದರಾಮಯ್ಯ ಜಿಲ್ಲಾ ಪ್ರವಾಸ

ಫೆ. 22ಕ್ಕೆ ಸಿಎಂ ಸಿದ್ದರಾಮಯ್ಯ ಜಿಲ್ಲಾ ಪ್ರವಾಸ

ಕಾರವಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ. 22ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಅಂದು ಬೆಳಿಗ್ಗೆ 11.50ಕ್ಕೆ ಮಂಜುಗುಣಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಕಾರವಾರ ವತಿಯಿಂದ, ಅಂಕೋಲಾ ತಾಲೂಕಿನ ಮಂಜುಗುಣಿ ಗ್ರಾಮದಿಂದ ಕುಮಟಾ ತಾಲೂಕಿನ ಗಂಗಾವಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ, ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ನಂತರ ಮಧ್ಯಾಹ್ನ 12.45 ಕ್ಕೆ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸಿರುವ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಮತ್ತು ಯಲ್ಲಾಪುರ ತಾಲೂಕಿನ ಖಾನಾಪುರ-ತಾಳಗುಪ್ಪ ರಾಜ್ಯ ಹೆದ್ದಾರಿ-93 ರ ಕಿ.ಮೀ 82.50ರಲ್ಲಿ ಸೇತುವೆ ನಿರ್ಮಾಣ, ಯಲ್ಲಾಪುರ ಪಟ್ಟಣದ ನಿರೀಕ್ಷಣಾ ಮಂದಿರದ ಹೊಸ ಕಟ್ಟಡ ನಿರ್ಮಾಣ ಹಾಗೂ ಮುಂಡಗೋಡ ತಾಲೂಕಿನ ಹೊಸ ಪ್ರವಾಸಿ ಮಂದಿರ ನಿರ್ಮಾಣ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share