Friday, October 23, 2026
HomeLocal Newsಅಪಪ್ರಚಾರ ನಿಲ್ಲಿಸಿ, ನಿಮ್ಮ ಜವಾಬ್ದಾರಿ ನಿರ್ವಹಿಸಿ

ಅಪಪ್ರಚಾರ ನಿಲ್ಲಿಸಿ, ನಿಮ್ಮ ಜವಾಬ್ದಾರಿ ನಿರ್ವಹಿಸಿ

ಸಿದ್ದಾಪುರ: ಅರಣ್ಯ ಅತಿಕ್ರಮಣ ಭೂಮಿಯಲ್ಲಿರುವ ಮನೆಗಳ ಕರ ಸ್ವೀಕರಿಸದಂತೆ ನೀಡಿರುವ ಆದೇಶವನ್ನು ಮುಂದಿಟ್ಟುಕೊಂಡು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಬಿಜೆಪಿ ನಾಯಕರು ಸಾರ್ವಜನಿಕರಲ್ಲಿ ಮನೆಗಳನ್ನು ತೆರವುಗೊಳಿಸಲಾಗುತ್ತದೆ ಎಂಬ ಭೀತಿ ಮೂಡಿಸುತ್ತಿದ್ದಾರೆ ಎಂದು ಶಾಸಕ ಭೀಮಣ್ಣ ಟಿ. ನಾಯ್ಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಜಿ.ಟಿ. ನಾಯ್ಕ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ‘ಸಂಘಟನ್ ಸೃಜನ್ ಅಭಿಯಾನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಇಂತಹ ಅಪಪ್ರಚಾರವನ್ನು ನಿಲ್ಲಿಸಿ, ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕು. ಅರಣ್ಯ ಭೂಮಿ ಕೇಂದ್ರ ಸರ್ಕಾರದ ಅಧೀನದಲ್ಲಿರುವುದರಿಂದ ಸ್ಥಳೀಯ ಸಂಸದರು ಹಾಗೂ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಮಟ್ಟದಲ್ಲಿ ಒತ್ತಡ ಹೇರಿ, ಅರಣ್ಯ ಹಕ್ಕು ಕಾಯ್ದೆಯಡಿ ಅತಿಕ್ರಮಣದಾರರಿಗೆ ಶಾಶ್ವತವಾಗಿ ಭೂಮಿ ಮಂಜೂರು ಮಾಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಅದನ್ನು ಬಿಟ್ಟು ಬಡ ಜನರಲ್ಲಿ ಭೀತಿ ವಾತಾವರಣ ಸೃಷ್ಟಿಸುವುದು ಸರಿಯಲ್ಲ ಎಂದು ಭೀಮಣ್ಣ ನಾಯ್ಕ ಖಂಡಿಸಿದರು.

ಪಶ್ಚಿಮ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರ ಪರವಾಗಿ ಕಾರ್ಯಕರ್ತರು ಮನೆ-ಮನೆಗೆ ತೆರಳಿ ಮತಯಾಚಿಸಬೇಕು. ಪದವೀಧರ ಮತದಾರರನ್ನು ಸಂಪರ್ಕಿಸಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದು ಭೀಮಣ್ಣ ನಾಯ್ಕ ಕರೆ ನೀಡಿದರು.

ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತಷ್ಟು ಬಲಪಡಿಸುವುದರ ಜೊತೆಗೆ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬೇಕು ಎಂದು ಶಾಸಕರು ಹೇಳಿದರು.

ಕಾರ್ಯಕ್ರಮದಲ್ಲಿ ಪಕ್ಷದ ಸಂಘಟನೆ ಹಾಗೂ ಮುಂಬರುವ ಚುನಾವಣೆಗಳ ಕುರಿತು ಶಾಸಕ ಭೀಮಣ್ಣ ನಾಯ್ಕ ಮತ್ತು ಜಿಲ್ಲಾಧ್ಯಕ್ಷ ಜಿ.ಟಿ. ನಾಯ್ಕ ಅವರು ಕಾರ್ಯಕರ್ತರೊಂದಿಗೆ ಚರ್ಚಿಸಿದರು.

ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ್ ನಾಯ್ಕ, ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share