Monday, September 7, 2026
Join WhatsApp Group
HomeCrimeಜೀವಕ್ಕೆ ಉರುಳಾದ ಮದ್ಯದ ಚಟ

ಜೀವಕ್ಕೆ ಉರುಳಾದ ಮದ್ಯದ ಚಟ

ಅಂಕೋಲಾ: ಮದ್ಯದ ಚಟ ಹಾಗೂ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಕೂಲಿ ಕಾರ್ಮಿಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಂಕೋಲಾ ತಾಲೂಕಿನ ವಾಸರಕುದ್ರಿಗೆ ಸಮೀಪದ ಮೇಲಿನಗುಳಿ ಗ್ರಾಮದಿಂದ ವರದಿಯಾಗಿದೆ.

ಮೃತನನ್ನು ನಾಗೇಶ ಜಂಗ್ರು ಆಗೇರ (50) ಎಂದು ಗುರುತಿಸಲಾಗಿದೆ.

ಈ ಕುರಿತು ಮೃತನ ಪತ್ನಿ ಶಾಂತಿ ನಾಗೇಶ ಆಗೇರ ಅಂಕೋಲಾ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಪ್ರಕಾರ, ನಾಗೇಶ ಆಗೇರ ವಿಪರೀತ ಮದ್ಯಪಾನದ ಚಟ ಹೊಂದಿದ್ದ. ಜೂನ್ 7ರಂದು ಮದ್ಯ ಸೇವಿಸಿ ಪತ್ನಿ ಹಾಗೂ ಮಗನ ಮೇಲೆ ಹಲ್ಲೆ ನಡೆಸಿದ್ದರಿಂದ ಶಾಂತಿ ಅವರು ಮಗನೊಂದಿಗೆ ತಾಯಿಯ ಮನೆಗೆ ತೆರಳಿದ್ದರು.

ಈ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡಿದ್ದ ನಾಗೇಶ ಆಗೇರ, ಜೂನ್ 12ರಂದು ಬೆಳಿಗ್ಗೆ 8.45ರಿಂದ 10 ಗಂಟೆಯ ನಡುವಿನ ಅವಧಿಯಲ್ಲಿ ತಾನು ಕೂಲಿ ಕೆಲಸ ಮಾಡುತ್ತಿದ್ದ ಮೊಗಟಾ ಗ್ರಾಮದ ಕೆಂಕಣಿ ಶಿವಪುರದಲ್ಲಿರುವ ಪ್ರಶಾಂತ ನಾಯ್ಕ ಅವರ ತೋಟದ ಮನೆಯಲ್ಲಿ ಕಬ್ಬಿಣದ ಜಂತಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share