Thursday, October 22, 2026
HomeLocal Newsದಾಂಡೇಲಪ್ಪ ಜಾತ್ರೆ: ಮದ್ಯ ಮಾರಾಟ ಬಂದ್, ವಾಹನ ಸಂಚಾರ ಮಾರ್ಗ ಬದಲು

ದಾಂಡೇಲಪ್ಪ ಜಾತ್ರೆ: ಮದ್ಯ ಮಾರಾಟ ಬಂದ್, ವಾಹನ ಸಂಚಾರ ಮಾರ್ಗ ಬದಲು

ದಾಂಡೇಲಿ: ದಾಂಡೇಲಪ್ಪ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದಾಂಡೇಲಿ ಶಹರ ಹಾಗೂ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.20ರ ಬೆಳಗ್ಗೆ 6 ಗಂಟೆಯಿಂದ ಅ.21ರ ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ಹಾಗೂ ಸಾಗಾಟ ನಿಷೇಧಿಸಲಾಗಿದೆ. ಜೊತೆಗೆ, ಜಾತ್ರೆಯ ಹಿನ್ನೆಲೆಯಲ್ಲಿ ದಾಂಡೇಲಿ-ಹಳಿಯಾಳ ಮಾರ್ಗದ ವಾಹನ ಸಂಚಾರದಲ್ಲಿಯೂ ಬದಲಾವಣೆ ಮಾಡಲಾಗಿದೆ.

ಜಾತ್ರೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ದಾಂಡೇಲಿ ಶಹರ ಮತ್ತು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲ ಮದ್ಯದಂಗಡಿ ಹಾಗೂ ವೈನ್‌ಶಾಪ್‌ಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

ಇದೇ ವೇಳೆ, ಜಾತ್ರೆಯ ಹಿನ್ನೆಲೆಯಲ್ಲಿ ಅ.19ರ ಸಂಜೆ 4 ಗಂಟೆಯಿಂದ ಅ.21ರ ಬೆಳಗ್ಗೆ 6 ಗಂಟೆಯವರೆಗೆ ದಾಂಡೇಲಿ ಕೆ.ಸಿ. ವೃತ್ತದ ಮೂಲಕ ಕೆರವಾಡ ಮಾರ್ಗವಾಗಿ ಹಳಿಯಾಳಕ್ಕೆ ತೆರಳುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಈ ಮಾರ್ಗದ ಬದಲಿಗೆ ದಾಂಡೇಲಿಯಿಂದ ಹಳಿಯಾಳಕ್ಕೆ ತೆರಳುವ ವಾಹನಗಳು ಸೋಮಾನಿ ವೃತ್ತ, ಬರ್ಚಿ ರಸ್ತೆ, ಬರ್ಚಿನಾಕಾ ಹಾಗೂ ಕರ್ಕಾನಾಕ ಮೂಲಕ ಸಂಚರಿಸಬೇಕು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share