Friday, July 24, 2026
Join WhatsApp Group
HomeCrimeಚಾಳಿ ಬಿಡದ ಡ್ರಗ್ ಪೆಡ್ಲರ್; ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ರವಾನೆ

ಚಾಳಿ ಬಿಡದ ಡ್ರಗ್ ಪೆಡ್ಲರ್; ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ರವಾನೆ

ದಾಂಡೇಲಿ: ಡ್ರಗ್ಸ್ ಮಾರಾಟ, ಸಾಗಣೆ ಹಾಗೂ ಸಂಗ್ರಹಣೆ ಚಟುವಟಿಕೆಯಲ್ಲಿ ನಿರಂತರವಾಗಿ ತೊಡಗಿದ್ದ ಆರೋಪದ ಹಿನ್ನೆಲೆ ಡ್ರಗ್ ಪೆಡ್ಲರ್ ವಿರುದ್ಧ PIT NDPS Act ಅಡಿಯಲ್ಲಿ ಮುನ್ನೆಚ್ಚರಿಕಾ ಬಂಧನ ಕ್ರಮ ಕೈಗೊಳ್ಳಲಾಗಿದ್ದು, ಆರೋಪಿಯನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಅಟ್ಟಲಾಗಿದೆ.

ದಾಂಡೇಲಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸುಭಾಷನಗರ ನಿವಾಸಿ ಆಯಾನ್ @ ಶಾನವಾಜ್ ತಂದೆ ಇಮೈಯಾಜ್ ಖಾನ್ (23) ವಿರುದ್ಧ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ 5 ಹಾಗೂ ಹುಬ್ಬಳ್ಳಿಯ Gokul Road Police ಠಾಣೆಯಲ್ಲಿ ಒಂದು ಸೇರಿ ಒಟ್ಟು ಆರು ಪ್ರಕರಣಗಳು ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಾಗಿದ್ದವು.

ಪೊಲೀಸ್ ಇಲಾಖೆಯ ಪ್ರಕಾರ, ಆರೋಪಿ ವೃತ್ತಿಪರ ಡ್ರಗ್ ಪೆಡ್ಲರ್ ಆಗಿದ್ದು, ಮಾದಕ ವಸ್ತುಗಳ ಸಂಗ್ರಹ, ಸಾಗಾಟ ಹಾಗೂ ಮಾರಾಟದಲ್ಲಿ ನಿರಂತರವಾಗಿ ತೊಡಗಿಕೊಂಡಿದ್ದ. ಹಲವು ಬಾರಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರೂ, ಜಾಮೀನು ಪಡೆದು ಮತ್ತೆ ಇದೇ ಚಟುವಟಿಕೆಯಲ್ಲಿ ಭಾಗಿಯಾಗುತ್ತಿದ್ದ ಎಂದು ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ, ದಾಂಡೇಲಿ ಸಿಪಿಐ ಹಾಗೂ ಡಿಎಸ್ಪಿ ಅವರು ಆರೋಪಿಯ ವಿರುದ್ಧ PIT NDPS ಕಾಯ್ದೆಯಡಿ ಕ್ರಮ ಕೈಗೊಳ್ಳಲು ಶಿಫಾರಸು ಸಲ್ಲಿಸಿದ್ದರು. ಬಳಿಕ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಮೂಲಕ ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರಿಗೆ ವರದಿ ಕಳುಹಿಸಲಾಗಿತ್ತು.

ಅದರಂತೆ, West Zone Police ಪೊಲೀಸ್ ಮಹಾನಿರೀಕ್ಷಕರು PIT NDPS ಕಾಯ್ದೆ 1988ರ ಕಲಂ 3(1) ಅಡಿಯಲ್ಲಿ ಆರೋಪಿಯನ್ನು ಮುನ್ನೆಚ್ಚರಿಕಾ ಬಂಧನದಲ್ಲಿಡಲು ಆದೇಶಿಸಿದ್ದಾರೆ. ಆದೇಶದಂತೆ ಆರೋಪಿಯನ್ನು ಬಂಧಿಸಿ Ballari Central Prisonಗೆ ರವಾನೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ PIT NDPS ಕಾಯ್ದೆಯಡಿ ಡ್ರಗ್ ಪೆಡ್ಲರ್ ವಿರುದ್ಧ ಕೈಗೊಳ್ಳಲಾದ ಇದು ಮೊದಲ ಪ್ರಕರಣವಾಗಿದ್ದು, ಜಿಲ್ಲೆಯನ್ನು ಡ್ರಗ್ ಮುಕ್ತವಾಗಿಸುವ ಕಾರ್ಯಾಚರಣೆಯ ಭಾಗವಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಡ್ರಗ್ಸ್ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದ್ದು, ಸಾರ್ವಜನಿಕರು ಹಾಗೂ ಯುವಜನತೆ ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಇಲಾಖೆ ಮನವಿ ಮಾಡಿದೆ. ಸಾರ್ವಜನಿಕರು ತಮ್ಮ ಸುತ್ತಮುತ್ತ ನಡೆಯುವ ಅನುಮಾನಾಸ್ಪದ ಡ್ರಗ್ಸ್ ಮಾರಾಟ ಅಥವಾ ಸಾಗಣೆ ಕುರಿತು ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆಯೂ ಕೋರಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share