Friday, July 24, 2026
Join WhatsApp Group
HomeLocal Newsವಿಟಿಯು ಕಾಲೇಜು ಬಳಿ ಬೃಹತ್‌ ಹೆಬ್ಬಾವು ಪ್ರತ್ಯಕ್ಷ; ರಕ್ಷಣೆ

ವಿಟಿಯು ಕಾಲೇಜು ಬಳಿ ಬೃಹತ್‌ ಹೆಬ್ಬಾವು ಪ್ರತ್ಯಕ್ಷ; ರಕ್ಷಣೆ

ದಾಂಡೇಲಿ: ನಗರದ ವಿಟಿಯು ಕಾಲೇಜಿನ ಮೈದಾನದ ಗಟಾರಿನಲ್ಲಿ ಸುಮಾರು 15 ಅಡಿ ಉದ್ದದ ಬೃಹತ್ ಹೆಬ್ಬಾವು ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಗಳು ಹಾಗೂ ಸ್ಥಳೀಯರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಗಟಾರಿನಲ್ಲಿ ಓಡಾಡುತ್ತಿದ್ದ ಹೆಬ್ಬಾವನ್ನು ಗಮನಿಸಿದ ವಿದ್ಯಾರ್ಥಿಗಳು ತಕ್ಷಣ ಶಿಕ್ಷಕರಿಗೆ ಮಾಹಿತಿ ನೀಡಿದ್ದು, ಬಳಿಕ ಅರಣ್ಯ ಇಲಾಖೆಗೆ ವಿಷಯ ತಿಳಿಸಲಾಯಿತು. ಸ್ಥಳಕ್ಕೆ ಉರಗ ತಜ್ಞ ರಾಜಾಕ್ ಶಾ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.

ಶ್ರಮಪಟ್ಟು ಹೆಬ್ಬಾವನ್ನು ಹಿಡಿಯುವ ಕಾರ್ಯಾಚರಣೆ ನಡೆಸುವ ವೇಳೆ ಉರಗ ತಜ್ಞ ರಜಾಕ್ ಶಾ ಅವರಿಗೆ ಅಪಾಯದ ಪರಿಸ್ಥಿತಿ ಎದುರಾಗಿದ್ದು, ಅದೃಷ್ಟವಶಾತ್ ಪಾರಾದ ಘಟನೆ ನಡೆದಿದೆ. ಆದರೂ ಧೈರ್ಯ ಕಳೆದುಕೊಳ್ಳದೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಸಹಕಾರದೊಂದಿಗೆ ಯಶಸ್ವಿಯಾಗಿ ಹೆಬ್ಬಾವನ್ನು ಸೆರೆಹಿಡಿಯಲಾಯಿತು.

ಬಳಿಕ ಹೆಬ್ಬಾವನ್ನು ಸುರಕ್ಷಿತವಾಗಿ ಸಮೀಪದ ಅರಣ್ಯ ಪ್ರದೇಶಕ್ಕೆ ಬಿಡಲಾಯಿತು.

ಜನರ ಜೀವ ರಕ್ಷಣೆಗೆ ಸದಾ ಮುಂದಾಗುವ ಉರಗ ತಜ್ಞ ರಜಾಕ್ ಶಾ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share