Friday, July 24, 2026
Join WhatsApp Group
HomeCrimeಅಂಬೇವಾಡಿಯಲ್ಲಿ ವಾಟರ್ ಮೀಟರ್‌ಗಳೇ ಮಾಯ!

ಅಂಬೇವಾಡಿಯಲ್ಲಿ ವಾಟರ್ ಮೀಟರ್‌ಗಳೇ ಮಾಯ!

ದಾಂಡೇಲಿ: ನಗರದ ಅಂಬೇವಾಡಿಯ ಜಿ-2 ಪ್ಲಸ್ ವಸತಿ ಸಮುಚ್ಚಯದಲ್ಲಿ ಅಳವಡಿಸಲಾಗಿದ್ದ 65 ನೀರಿನ ಮೀಟರ್‌ಗಳನ್ನು ಕಳ್ಳರು ಕದ್ದೊಯ್ದಿರುವ ಘಟನೆ ಬೆಳಕಿಗೆ ಬಂದಿದೆ. ಕಳುವಾದ ಮೀಟರ್‌ಗಳ ಒಟ್ಟು ಮೌಲ್ಯ ₹4,22,500 ಎಂದು ಅಂದಾಜಿಸಲಾಗಿದೆ.

ಸುಪ್ರದಾ ಕನ್‌ಸ್ಟ್ರಕ್ಷನ್ಸ್‌ನಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿರುವ ಆನಂದ ವಾಮನ ದೀಕ್ಷಿತ ಅವರು ನೀಡಿದ ದೂರಿನ ಮೇರೆಗೆ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜುಲೈ 10ರ ಸಂಜೆ 6 ಗಂಟೆಯಿಂದ ಜುಲೈ 12ರ ಬೆಳಿಗ್ಗೆ 11 ಗಂಟೆಯ ನಡುವಿನ ಅವಧಿಯಲ್ಲಿ, ಅಂಬೇವಾಡಿಯ ಜಿ-2 ಪ್ಲಸ್ ಮನೆಗಳ ಹೊರಭಾಗದಲ್ಲಿ ಅಳವಡಿಸಿದ್ದ 65 ನೀರಿನ ಮೀಟರ್‌ಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.

ಘಟನೆಯ ಬಗ್ಗೆ ಮೊದಲು ಕಂಪನಿಯ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದ್ದು, ಈ ಸಂಬಂಧ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share