Monday, September 7, 2026
Join WhatsApp Group
HomeLocal Newsಏಕಾಏಕಿ ಅಸ್ವಸ್ಥತೆ; ಉಸಿರು ನಿಲ್ಲಿಸಿದ ಪೊಲೀಸ್ ಸಿಬ್ಬಂದಿ

ಏಕಾಏಕಿ ಅಸ್ವಸ್ಥತೆ; ಉಸಿರು ನಿಲ್ಲಿಸಿದ ಪೊಲೀಸ್ ಸಿಬ್ಬಂದಿ

ಕಾರವಾರ: ಉತ್ತರ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್)ಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ಏಕಾಏಕಿ ಅಸ್ವಸ್ಥಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಮೃತಪಟ್ಟ ಘಟನೆ ಕಾರವಾರದಲ್ಲಿ ನಡೆದಿದೆ.

ಮೃತರನ್ನು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿವಾಸಿ ಸುನೀಲ್ ಅಣ್ಣಪ್ಪ ಕೋಳಿ (43) ಎಂದು ಗುರುತಿಸಲಾಗಿದೆ. ಅವರು ಪ್ರಸ್ತುತ ಕಾರವಾರದಲ್ಲಿರುವ ಉತ್ತರ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಮಾಹಿತಿಯ ಪ್ರಕಾರ, ಜೂನ್ 17ರ ಬೆಳಗ್ಗೆ ಸುನೀಲ್ ಕೋಳಿ ಅವರಿಗೆ ಏಕಾಏಕಿ ತೀವ್ರ ಆಯಾಸ ಕಾಣಿಸಿಕೊಂಡಿತ್ತು. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರು ಡಿಎಆರ್ ಕಚೇರಿಯ ವಿಶ್ರಾಂತಿ ಕೊಠಡಿಗೆ ತೆರಳಿ ವಿಶ್ರಾಂತಿ ಪಡೆಯಲು ಯತ್ನಿಸಿದ್ದರು. ಆದರೆ, ಸಮಯ ಕಳೆದರೂ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿರಲಿಲ್ಲ.

ಮಧ್ಯಾಹ್ನದ ವೇಳೆಗೆ ಅವರ ಸ್ಥಿತಿ ಮತ್ತಷ್ಟು ಹದಗೆಟ್ಟಿರುವುದನ್ನು ಗಮನಿಸಿದ ಸಹೋದ್ಯೋಗಿಗಳು ತಕ್ಷಣ ಕಾರವಾರ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲು ಮುಂದಾದರು. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಬಳಿಕ ಜಿಲ್ಲಾಸ್ಪತ್ರೆಯ ವೈದ್ಯರು ಅವರ ಸಾವನ್ನು ದೃಢಪಡಿಸಿದ್ದಾರೆ.

ಸುನೀಲ್ ಕೋಳಿ ಅವರ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿದುಬಂದಿದೆ.

ಘಟನೆಯಿಂದ ಪೊಲೀಸ್ ಇಲಾಖೆಯಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share