ಕಾರವಾರ: ಪಿಯುಸಿ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಖಾಸಗಿ ವಲಯದಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ಕಾರವಾರದ ಯೋಜನಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಡಿಬಿಎಸ್ ಬ್ಯಾಂಕ್ ಪ್ರೈವೇಟ್ ಲಿಮಿಟೆಡ್‌ನ ವಿವಿಧ ಹುದ್ದೆಗಳ ಭರ್ತಿಗಾಗಿ ಅ.29ರಂದು ನೇರ ಸಂದರ್ಶನ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಕಾರವಾರದ ಸಿವಿಲ್ ಕೋರ್ಟ್ ರಸ್ತೆಯಲ್ಲಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಮೀಪದ ಶ್ರೀಮತಿ ಪ್ರೇಮಾಬಾಯಿ ರಾಯ್ಕರ ಕಟ್ಟಡದಲ್ಲಿರುವ ಯೋಜನಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ.
22ರಿಂದ 35 ವರ್ಷ ವಯೋಮಾನದ ಅರ್ಹ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಆಯ್ಕೆಯಾದವರಿಗೆ ಕಾರವಾರ, ಉಡುಪಿ, ಮಂಗಳೂರು ಹಾಗೂ ಪುತ್ತೂರಿನಲ್ಲಿ ಉದ್ಯೋಗಾವಕಾಶ ಇರಲಿದೆ.
ಆಸಕ್ತರು ತಮ್ಮ ರೆಸ್ಯೂಮ್ ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ 8660410237, 8310044796 ಮೊಬೈಲ್ ಸಂಖ್ಯೆಗಳು ಅಥವಾ 08382-226386 ಕಚೇರಿ ದೂರವಾಣಿಯನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.