ಕಾರವಾರ: ಕಾರವಾರ ಅಂಚೆ ವಿಭಾಗದ ಕಾರವಾರ, ಅಂಕೋಲಾ, ಕುಮಟಾ, ಹೊನ್ನವರ, ಭಟ್ಕಳ, ತಾಲೂಕಿನ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮಾ ಪ್ರತಿನಿಧಿಗಳಾಗಿ ಕಾರ್ಯ ನಿರ್ವಹಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು ಕಾರವಾರ, ಅಂಕೋಲಾ, ಕುಮಟಾ, ಹೊನ್ನವರ, ಭಟ್ಕಳ, ತಾಲೂಕಿನ ಖಾಯಂ ನಿವಾಸಿಗಳಾಗಿರಬೇಕು. ಅರ್ಜಿ ನಮೂನೆಯನ್ನು ಕಾರವಾರ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಬರುವ ಯಾವುದೇ ಅಂಚೆ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಕಾರವಾರ ಅಂಚೆ ಅಧೀಕ್ಷಕರು ನಡೆಸುವ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿದ್ದು ಕಡ್ಡಾಯವಾಗಿ 18 ವರ್ಷ ಮೇಲ್ಪಟ್ಟಿರಬೇಕು. ಆಯ್ಕೆಯಾದ ಅಭ್ಯರ್ಥಿಗಳು ರೂ 5,000ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರ ರೂಪದಲ್ಲಿ ಭದ್ರತಾ ಠೇವಣಿ ಇಡಬೇಕಾಗುತ್ತದೆ.
ಪಡೆದುಕೊಂಡ ಪಾಲಿಸಿಗಳ ಆಧಾರದ ಮೇಲೆ ಇಂಸೆಂಟಿವ್ ನೀಡಲಾಗುವುದು. ಆಯ್ಕೆಯಾದ ಜೀವ ವಿಮಾ ಪ್ರತಿನಿಧಿಗಳಿಗೆ ನಿಗದಿತ ವೇತನ ಇರುವುದಿಲ್ಲ. ಅಭ್ಯರ್ಥಿಗಳು ಬೇರೆ ಯಾವುದೇ ವಿಮಾ ಕಂಪನಿ/ಸಂಸ್ಥೆ/ ಸಂಘಗಳ ಏಜೆಂಟ್ ಆಗಿರಬಾರದು.
ಆಸಕ್ತಿಯುಳ್ಳ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆ, ಎಸ್‌ಎಸ್.ಎಲ್.ಸಿ ಅಂಕಪಟ್ಟಿಯ ಪ್ರತಿ, ಪೋಸ್ಟ್ ಆಫೀಸ್ ಉಳಿತಾಯ ಖಾತೆಯ ಪ್ರತಿ, ಪಾನ್ ಕಾರ್ಡ್ ಪ್ರತಿ, ಆಧಾರ್ ಕಾರ್ಡ್ ಪ್ರತಿ ಸಹಿತ ಜೂನ್ 9ರಂದು ಬೆಳಗ್ಗೆ 11 ಗಂಟೆಗೆ ಅಂಚೆ ನೇರ ಪ್ರತಿನಿಧಿಗಳ ಸಂದರ್ಶನಕ್ಕೆ ಹಾಜರಾಗುವಂತೆ ಕಾರವಾರ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.