Friday, July 24, 2026
Join WhatsApp Group
HomeLocal Newsಡಿ.ಕೆ. ಶಿವಕುಮಾರ್ ಜನ್ಮದಿನ: ಗ್ರಾಮದೇವಿಗೆ ವಿಶೇಷ ಪೂಜೆ

ಡಿ.ಕೆ. ಶಿವಕುಮಾರ್ ಜನ್ಮದಿನ: ಗ್ರಾಮದೇವಿಗೆ ವಿಶೇಷ ಪೂಜೆ

ಯಲ್ಲಾಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ಜನ್ಮದಿನದ ಅಂಗವಾಗಿ ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಪಟ್ಟಣದ ಗ್ರಾಮದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್, ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಸಂಘಟಿತವಾಗಿ ಮತ್ತು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದ್ದು, ಉಪಮುಖ್ಯಮಂತ್ರಿಗಳಾಗಿ ಜನಪರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುತ್ತಿದ್ದಾರೆ ಎಂದು ಹೇಳಿದರು.

ಅಲ್ಲದೆ, ಡಿ.ಕೆ. ಶಿವಕುಮಾರ್ ಅವರು ಶೀಘ್ರದಲ್ಲೇ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡುವ ಅವಕಾಶ ದೊರೆಯಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್. ಭಟ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿಜಯ ಮಿರಾಶಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎನ್.ಕೆ. ಭಟ್, ನಗರ ಘಟಕದ ಅಧ್ಯಕ್ಷ ಸತೀಶ ನಾಯ್ಕ, ಪ್ರಮುಖರಾದ ಶಿರೀಷ್ ಪ್ರಭು, ಎಮ್.ಡಿ. ಮುಲ್ಲಾ, ಫೈರೋಜ್ ಶೇಖ್, ಗಣೇಶ ಪಾಟಣಕರ್, ಅನಿಲ್ ಮರಾಠೆ, ಸಂತೋಷ ನಾಯ್ಕ, ಫಕ್ಕೀರ್ ಹರಿಜನ, ಮಣಿಕಂಠ ನಾಯ್ಕ, ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಗಣೇಶ ಹೆಗಡೆ, ಪ.ಪಂ ಮಾಜಿ ಸದಸ್ಯ ಅಮಿತ ಅಂಗಡಿ, ರಾಜು ನಾಯ್ಕ, ನರ್ಮದಾ ನಾಯ್ಕ, ಸುನಂದಾ ದಾಸ್, ಮಹಿಳಾ ಕಾಂಗ್ರೆಸ್ ಮುಖಂಡರಾದ ಪೂಜಾ ನೇತ್ರೆಕರ್, ರೂಪಾ ಪಾಟಣಕರ್, ಸರಸ್ವತಿ ಗುನಗಾ, ಮುಶರತ್ ಖಾನ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share