Thursday, October 22, 2026
HomeLocal Newsಬರದಲ್ಲೂ ಬಣ ರಾಜಕೀಯ ಬೇಕೆ?

ಬರದಲ್ಲೂ ಬಣ ರಾಜಕೀಯ ಬೇಕೆ?

ಯಲ್ಲಾಪುರ: ಈ ವರ್ಷ ಇಡೀ ರಾಜ್ಯವೇ ಬರಕ್ಕೆ ತುತ್ತಾಗಿದೆ. ಬರದ ಸಂದರ್ಭದಲ್ಲೂ ಸರ್ಕಾರ ಬಣ ರಾಜಕೀಯ ಮಾಡುತ್ತಿದೆಯೇ ಎಂದು ಯಲ್ಲಾಪುರದ ನಾಗರಿಕ ವೇದಿಕೆಯ ಅಧ್ಯಕ್ಷ ರಾಮು ನಾಯ್ಕ ಪ್ರರಶ್ನಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದ 239 ತಾಲೂಕುಗಳ ಪೈಕಿ 226 (ಶೇ.95) ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿರುವ ರಾಜ್ಯ ಸರ್ಕಾರ, ಅಲ್ಲಿನ ತುರ್ತು ಅವಶ್ಯಕತೆಗಳನ್ನು ಗಮನಿಸಲು ಸಂಬಂಧಪಟ್ಟ ಇಲಾಖೆಗಳಿಗೆ ಈಗಾಗಲೇ ಸೂಚನೆ ನೀಡಿದೆ.

ಉತ್ತರ ಕನ್ನಡ ಜಿಲ್ಲೆಯೂ ಬರದಿಂದ ಹೊರತಾಗಿಲ್ಲ. ಆದರೆ, ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಕೈಯಲ್ಲಿರುವ ಐದು ಕ್ಷೇತ್ರಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಿ ಘೋಷಿಸಿರುವ ರಾಜ್ಯ ಸರ್ಕಾರಕ್ಕೆ, ಜಿಲ್ಲೆಯ ನಡುಮಧ್ಯದಲ್ಲಿರುವ ಕುಮಟಾ ಕ್ಷೇತ್ರ ಮಾತ್ರ ಕಾಣಲಿಲ್ಲ. ಯಾಕೆ, ಇಲ್ಲಿ ಬಿಜೆಪಿ ಶಾಸಕರಿದ್ದಾರೆಂದೇ?

ಬರದ ಸಂದರ್ಭದಲ್ಲೂ ಸರ್ಕಾರ ಬಣ ರಾಜಕೀಯ ಮಾಡುತ್ತಿದೆಯೇ ಎಂಬ ಪ್ರಶ್ನೆ ಮೂಡುತ್ತದೆ ಎಂದು ಯಲ್ಲಾಪುರ ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share