ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ತಪಾಸಣೆಯಲ್ಲಿ ವಿದೇಶದಿಂದ ಬಂದಿದ್ದ ಓರ್ವ ಪ್ರಯಾಣಿಕನ ಲಗೇಜ್‌ನಿಂದ ಮಾದಕ ವಸ್ತುಗಳು ಪತ್ತೆಯಾದ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಅಧಿಕಾರಿಗಳ ಮಾಹಿತಿಯಂತೆ ಬ್ಯಾಂಕಾಕ್‌ನಿಂದ ಬಂದಿದ್ದ ಪ್ರಯಾಣಿಕನ ಲಗೇಜ್ ಪರಿಶೀಲಿಸಿದ ವೇಳೆ ಸುಮಾರು 9.7 ಕೆಜಿ ಹೈಡ್ರೋಪೋನಿಕ್ ಗಾಂ*ಜಾ ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಅಂದಾಜು ಮೌಲ್ಯ ಸುಮಾರು 3.39 ಕೋಟಿ ರೂ ಎಂದು ಅಂದಾಜಿಸಲಾಗಿದೆ.
ಸಂಬಂಧಿತ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ. ಪ್ರಕರಣದ ಕುರಿತಂತೆ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಅಧಿಕಾರಿಗಳ ಅಧಿಕೃತ ಪ್ರಕಟಣೆ ನಿರೀಕ್ಷಿಸಲಾಗುತ್ತಿದೆ.