ಯಲ್ಲಾಪುರ: ವಿಶೇಷ ಮತದಾರರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಮತದಾರರ ಪಟ್ಟಿಯನ್ನು ಸಮರ್ಪಕ ಹಾಗೂ ನಿಖರಗೊಳಿಸುವ ಮಹತ್ವದ ಕಾರ್ಯವಾಗಿದ್ದು, ಅರ್ಹ ಪ್ರತಿಯೊಬ್ಬ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಅಗತ್ಯ ಮಾಹಿತಿಯನ್ನು ಪರಿಶೀಲಿಸಿಕೊಳ್ಳಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ್ ಕರೆ ನೀಡಿದರು.
ಕಿರವತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಂಬಡಿಕೊಪ್ಪ ಹಾಗೂ ತೆಂಗಿನಗೇರಿ ಬೂತ್‌ಗಳಲ್ಲಿ ಬುಧವಾರ ನಡೆದ ಎಸ್‌ಐಆರ್ ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು.
ಎಸ್‌ಐಆರ್ ಅಭಿಯಾನವನ್ನು ಯಶಸ್ವಿಗೊಳಿಸಲು ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿಜಯ ಮಿರಾಶಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್. ಭಟ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಎಸ್‌ಐಆರ್ ಬ್ಲಾಕ್ ಉಸ್ತುವಾರಿ ಎನ್.ಕೆ. ಭಟ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ರವಿ ಭಟ್ ಬರಗದ್ದೆ, ತಾಲೂಕು ಕಾಂಗ್ರೆಸ್ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷ ಮಾಕು ಕೊಕರೆ, ಕಿರವತ್ತಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರೆಹಮತ್ ಅಬ್ಬಿಗೇರಿ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.