Monday, September 7, 2026
Join WhatsApp Group
HomeLocal Newsಅತಿಕ್ರಮಣಕ್ಕೆ ಬ್ರೇಕ್: ಸಾರ್ವಜನಿಕ ರಸ್ತೆಗೆ ಅಡ್ಡಲಾಗಿದ್ದ ತಡೆಗೋಡೆ ತೆರವು!

ಅತಿಕ್ರಮಣಕ್ಕೆ ಬ್ರೇಕ್: ಸಾರ್ವಜನಿಕ ರಸ್ತೆಗೆ ಅಡ್ಡಲಾಗಿದ್ದ ತಡೆಗೋಡೆ ತೆರವು!

ಕಾರವಾರ: ಕಾರವಾರ ತಾಲೂಕಿನ ಚೆಂಡಿಯಾ ಗ್ರಾಮದಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗಿದ್ದ ಅಕ್ರಮ ತಡೆಗೋಡೆಯನ್ನು ಪಂಚಾಯತ್ ಆಡಳಿತ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ತೆರವುಗೊಳಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿಯಿಂದ ಐಸ್ ಫ್ಯಾಕ್ಟರಿ ಸಂಪರ್ಕಿಸುವ ರಸ್ತೆ ಅನಾದಿಕಾಲದಿಂದ ಸಾರ್ವಜನಿಕ ಬಳಕೆಯಲ್ಲಿದ್ದು, ಕಾಲಕ್ರಮೇಣ ಅಭಿವೃದ್ಧಿಗೊಂಡು ಕಾಂಕ್ರೀಟ್ ರಸ್ತೆಯಾಗಿ ಮಾರ್ಪಟ್ಟಿದೆ. ಆದರೆ ಇತ್ತೀಚೆಗೆ ಚೆಂಡಿಯಾ ಗ್ರಾಮದ ನಿವಾಸಿಯೊಬ್ಬರು ರಸ್ತೆಗೆ ಅಡ್ಡವಾಗಿ ತಡೆಗೋಡೆ ನಿರ್ಮಿಸಿರುವುದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಉಂಟಾಗಿತ್ತು.

ಈ ಬಗ್ಗೆ ಗ್ರಾಮಸ್ಥರು ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ಭೂದಾಖಲೆಗಳ ಸಹಾಯಕ ನಿರ್ದೇಶಕರ ವರದಿ, ಉಪ ತಹಶೀಲ್ದಾರ್ ಪರಿಶೀಲನೆ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಕಾನೂನು ಸಲಹೆಯ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿದೆ.

ಚೆಂಡಿಯಾ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಪ್ರಶಾಂತ್ ಎಚ್.ಎಸ್. ನೇತೃತ್ವದಲ್ಲಿ, ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಕಾರ್ಯಾಚರಣೆ ನಡೆಸಿ ತಡೆಗೋಡೆಯನ್ನು ತೆರವುಗೊಳಿಸಲಾಯಿತು. ಇದರೊಂದಿಗೆ ರಸ್ತೆ ಮತ್ತೆ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಂಡಿದೆ.

ಗ್ರಾಮಸ್ಥರ ದೂರಿಗೆ ಸ್ಪಂದಿಸಿ ಆಡಳಿತ ತ್ವರಿತ ಕ್ರಮ ಕೈಗೊಂಡಿರುವುದಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share