Friday, July 24, 2026
Join WhatsApp Group
HomeStateಇಸ್ರೋ ಮಾಜಿ ನೌಕರನಿಂದ ಪತ್ನಿಯ ಹ*ತ್ಯೆ

ಇಸ್ರೋ ಮಾಜಿ ನೌಕರನಿಂದ ಪತ್ನಿಯ ಹ*ತ್ಯೆ

ಬೆಂಗಳೂರು: ಇಸ್ರೋದ ಮಾಜಿ ನೌಕರನೊಬ್ಬ ತಮ್ಮ ಪತ್ನಿಯನ್ನು ಉಸಿರುಗಟ್ಟಿಸಿ ಹ*ತ್ಯೆ ಮಾಡಿದ ಘಟನೆ ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಆರೋಪಿಯನ್ನು ನಾಗೇಶ್ ಈಶ್ವರ ರಾವ್ ಎಂದು ಗುರುತಿಸಲಾಗಿದ್ದು, ವೈಟ್‌ಫೀಲ್ಡ್‌ನ ಬೊಮ್ಮನಹಳ್ಳಿ ಪ್ರದೇಶದಲ್ಲಿರುವ ‘ವರ್ಚುವೋಸೋ’ ಅಪಾರ್ಟ್‌ಮೆಂಟ್ ಸಂಕೀರ್ಣದ ಮನೆಯಲ್ಲಿ ಈ ಘಟನೆ ನಡೆದಿದೆ.

ಪತ್ನಿ ಸಂಧ್ಯಾಶ್ರೀ ಮೃತದೇಹ ಮನೆ ಒಳಗೆ ಪತ್ತೆಯಾಗಿದ್ದು, ಬುಧವಾರ ಬೆಳಿಗ್ಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ನಾಗೇಶ್ ರಾವ್ ಕೆಲಕಾಲದಿಂದ ಮಾನಸಿಕ ಅಸ್ವಸ್ಥತೆ ಹಾಗೂ ಮಾನಸಿಕ ಒತ್ತಡದ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚಿನ ತಿಂಗಳುಗಳಲ್ಲಿ ಗಂಭೀರ ಭಾವನಾತ್ಮಕ ಒತ್ತಡದಲ್ಲಿದ್ದರು ಎಂದು ತಿಳಿದುಬಂದಿದೆ. “ನನ್ನ ಸಾ*ವಿನ ನಂತರ ಪತ್ನಿಯನ್ನು ಯಾರು ನೋಡಿಕೊಳ್ಳುತ್ತಾರೆ?” ಎಂಬ ಆತಂಕದಿಂದ ಆಕೆಯನ್ನು ಕೊಂ*ದಿರುವುದಾಗಿ ಆರೋಪಿಯು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಆರೋಪಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಘಟನೆಯ ಬಳಿಕ ಆತ ಆತ್ಮ*ಹತ್ಯೆಗೆ ಯತ್ನಿಸುವ ಉದ್ದೇಶದಲ್ಲಿದ್ದಂತೆ ಕಾಣುತ್ತದೆ. ಈ ಹಿನ್ನೆಲೆಯಲ್ಲಿ ಪತ್ನಿಯ ಮೇಲೆ ದಾಳಿ ನಡೆಸಿದ್ದಾರೆ. ಇತರೆ ಪ್ರಮುಖ ಕಾರಣಗಳು ಕಂಡುಬಂದಿಲ್ಲ” ಎಂದು ವೈಟ್‌ಫೀಲ್ಡ್ ಉಪ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ದಂಪತಿಯ ಪುತ್ರಿ ಅಮೆರಿಕದಲ್ಲಿ ವಾಸವಾಗಿದ್ದು, ಘಟನೆ ಕುರಿತು ಆಕೆಗೆ ಮಾಹಿತಿ ನೀಡಲಾಗಿದೆ. ಪ್ರಕರಣದ ಕುರಿತು ಮುಂದಿನ ತನಿಖೆ ನಡೆಯುತ್ತಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share