Thursday, July 23, 2026
Join WhatsApp Group
HomeAgricultureಟ್ರ್ಯಾಕ್ಟರ್‌ನಿಂದ ಪಂಪ್‌ಸೆಟ್‌ವರೆಗೆ ಸಬ್ಸಿಡಿ; ಈಗಲೇ ಅರ್ಜಿ ಹಾಕಿ

ಟ್ರ್ಯಾಕ್ಟರ್‌ನಿಂದ ಪಂಪ್‌ಸೆಟ್‌ವರೆಗೆ ಸಬ್ಸಿಡಿ; ಈಗಲೇ ಅರ್ಜಿ ಹಾಕಿ

ಕಾರವಾರ: ಪ್ರಸಕ್ತ ಸಾಲಿನ ಕೃಷಿ ಯಾಂತ್ರೀಕರಣ ಯೋಜನೆಯಡಿ ಕೃಷಿ ಯಂತ್ರೋಪಕರಣಗಳು ಹಾಗೂ ತುಂತುರು ನೀರಾವರಿ ಘಟಕಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲು ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ಹಾಗೂ ಪರಿಶಿಷ್ಟ ಜಾತಿಯ ರೈತರಿಗೆ ಶೇ.90 ರಿಯಾಯತಿಯಲ್ಲಿ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟಾವೇಟರ್, ಕಳೆ ಕೊಚ್ಚುವ ಯಂತ್ರ, ಪವರ್ ವಿಡರ್, ಪವರ್ ಸ್ಪ್ರೇಯರ್, ಡೀಸೆಲ್ ಪಂಪ್‌ಸೆಟ್ ಸೇರಿದಂತೆ ವಿವಿಧ ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಗುತ್ತದೆ.

ಇದಲ್ಲದೆ, ತುಂತುರು ನೀರಾವರಿ ಯೋಜನೆಯಡಿ ಶೇ.90 ರಿಯಾಯಿತಿಯಲ್ಲಿ ಹೆಚ್‌ಡಿಪಿಇ (HDPE) ಪೈಪ್‌ಗಳನ್ನೊಳಗೊಂಡ ತುಂತುರು ನೀರಾವರಿ ಘಟಕವೂ ಲಭ್ಯವಿರುತ್ತದೆ.

ಆಸಕ್ತ ರೈತರು ಪಹಣಿ (RTC), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ನಕಲು, ಎರಡು ಭಾವಚಿತ್ರ ಹಾಗೂ ₹100 ಮುಖಬೆಲೆಯ ಛಾಪಾ ಕಾಗದದೊಂದಿಗೆ ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share