Tuesday, June 16, 2026
HomeLocal Newsಅಂಕೋಲಾ | ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಐವರ ಬಂಧನ

ಅಂಕೋಲಾ | ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಐವರ ಬಂಧನ

ಅಂಕೋಲಾ: ತಾಲೂಕಿನ ಬೆಳಂಬರ ಗ್ರಾಮದ ಉತ್ತರ ಖಾರ್ವಿವಾಡದಲ್ಲಿ ಸಾರ್ವಜನಿಕ ರಸ್ತೆಯ ಮೇಲೆ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಐವರ ವಿರುದ್ಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೂನ್ 3ರಂದು ರಾತ್ರಿ 9 ಗಂಟೆ ಸುಮಾರಿಗೆ ಬೆಳಂಬರ ಉತ್ತರ ಖಾರ್ವಿವಾಡದ ಸಾರ್ವಜನಿಕ ಬಾವಿ ಸಮೀಪದ ರಸ್ತೆಯಲ್ಲಿ ಕೆಲವರು ಹಣ ಪಣಕ್ಕಿಟ್ಟು ಇಸ್ಪೀಟ್ ಜೂಜಾಟ ಆಡುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದರು. ಈ ವೇಳೆ ಜೂಜಾಟದಲ್ಲಿ ತೊಡಗಿದ್ದ ಸುಭಾಷ ವಿಷ್ಣು ಖಾರ್ವಿ (50), ರವಿ ತಿಮ್ಮಪ್ಪ ಗೌಡ (41), ಯೋಗೇಶ ಕುಸ್ಲು ಗೌಡ (35), ಸಂತೋಷ ಗಣಪತಿ ಖಾರ್ವಿ (39) ಹಾಗೂ ಹರ್ಷನ ಸುಧಾಕರ ಖಾರ್ವಿ (22) ಸೇರಿದಂತೆ ಇತರರು ಸಿಕ್ಕಿಬಿದ್ದಿದ್ದಾರೆ.

ಆರೋಪಿತರು ಇಸ್ಪೀಟ್ ಎಲೆಗಳ ಮೇಲೆ ₹200 ರಿಂದ ₹500ರವರೆಗೆ ಹಣ ಪಣಕ್ಕಿಟ್ಟು ಜೂಜಾಟದಲ್ಲಿ ತೊಡಗಿದ್ದರು. ದಾಳಿ ವೇಳೆ ₹12,340 ನಗದು ಹಾಗೂ ಜೂಜಾಟಕ್ಕೆ ಬಳಸುತ್ತಿದ್ದ ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಅಂಕೋಲಾ ಪೊಲೀಸ್ ಠಾಣೆಯ ಪಿಎಸ್‌ಐ ಗುರುನಾಥ ಹಾದಿಮನಿ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share