Monday, September 7, 2026
Join WhatsApp Group
HomeCrimeಪ್ಲೈಓವರ್ ಬಳಿ ಕ್ಯಾಂಟರ್-ಕಾರು ಡಿಕ್ಕಿ; ಇಬ್ಬರು ಚಾಲಕರ ವಿರುದ್ಧ ಪ್ರಕರಣ

ಪ್ಲೈಓವರ್ ಬಳಿ ಕ್ಯಾಂಟರ್-ಕಾರು ಡಿಕ್ಕಿ; ಇಬ್ಬರು ಚಾಲಕರ ವಿರುದ್ಧ ಪ್ರಕರಣ

ಅಂಕೋಲಾ: ತಾಲೂಕಿನ ಪ್ಲೈಓವರ್ ಸಮೀಪ ಶ್ರೀಕುಮಾರ್ ಸರಕು ಸಾಗಣೆ ಕ್ಯಾಂಟರ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಗಾಯಗೊಂಡಿದ್ದು, ಇಬ್ಬರೂ ಚಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಕ್ಯಾಂಟರ್ ವಾಹನ (ಕೆಎ-47/ಎ-0506) ಚಾಲಕ ಮಹೇಶ್  ಯಾವುದೇ ಸೂಚನೆ ನೀಡದೇ ಏಕಾಏಕಿ ಬಾಳೆಗುಳಿಯಿಂದ ಯಲ್ಲಾಪುರ ಕಡೆಗೆ ವಾಹನ ತಿರುಗಿಸಿದ್ದು, ಇದೇ ವೇಳೆ ಸ್ವಿಫ್ಟ್ ಕಾರು (ಜಿಎ-08/ಇ-8357) ಚಾಲಕ ಸೃಜನ ಅವರು ಸಹ ಅತಿವೇಗದಲ್ಲಿ ವಾಹನ ಚಲಾಯಿಸುತ್ತಿದ್ದ ಕಾರಣ ಕಾರು ಕ್ಯಾಂಟರ್‌ನ ಬಲಭಾಗಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಸಾತ್ವಿಕ, ವಿನಾಯಕ, ಅಬ್ದುಲ್ ಹಾಗೂ ಪ್ರತಾಪ್ ಸೇರಿದಂತೆ ಹಲವರಿಗೆ ಗಾಯಗಳಾಗಿದ್ದು, ಕಾರು ಚಾಲಕ ಸೃಜನ ಅವರಿಗೂ ಗಾಯಗಳಾಗಿವೆ.

ಎರಡೂ ವಾಹನಗಳ ಚಾಲಕರು ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂದು ದೂರಿನಲ್ಲಿ ಆರೋಪಿಸಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share