Friday, July 24, 2026
Join WhatsApp Group
HomeLocal Newsರಮಾನಂದ ನಾಯಕ ನಿಧನಕ್ಕೆ ರವೀಂದ್ರ ನಾಯ್ಕ ಸಂತಾಪ

ರಮಾನಂದ ನಾಯಕ ನಿಧನಕ್ಕೆ ರವೀಂದ್ರ ನಾಯ್ಕ ಸಂತಾಪ

ಶಿರಸಿ: ಉತ್ತರ ಕನ್ನಡ ಜಿಲ್ಲಾ ಪರಿಷತ್ತಿನ ಪ್ರಥಮ ಅಧ್ಯಕ್ಷರು ಹಾಗೂ ಸಾಮಾಜಿಕ ಚಿಂತಕರಾಗಿದ್ದ ರಮಾನಂದ ನಾಯಕರ ನಿಧನಕ್ಕೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಜಕೀಯದ ಜೊತೆಗೆ ಸಾಮಾಜಿಕ ಹೋರಾಟದ ಬದುಕನ್ನು ಕಟ್ಟಿಕೊಂಡಿದ್ದ ರಮಾನಂದ ನಾಯಕರ ಜೀವನ ಆದರ್ಶಮಯವಾಗಿತ್ತು. ಕಳಂಕ ರಹಿತ ಸಾರ್ವಜನಿಕ ಜೀವನ ಹಾಗೂ ಜನಪರ ರಾಜಕೀಯ ಅವರ ವ್ಯಕ್ತಿತ್ವದ ವಿಶೇಷತೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯ ಪ್ರಮುಖ ಸಮಸ್ಯೆಗಳಲ್ಲಿ ಒಂದಾದ ಅರಣ್ಯ ಭೂಮಿ ಹಕ್ಕಿನ ಹೋರಾಟದಲ್ಲಿ ರಮಾನಂದ ನಾಯಕರು ಅರಣ್ಯವಾಸಿಗಳೊಂದಿಗೆ ಹೆಜ್ಜೆ ಹಾಕಿದ್ದು, ಸಂಘಟನೆ, ಹೋರಾಟ ಹಾಗೂ ಪಾದಯಾತ್ರೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದನ್ನು ರವೀಂದ್ರ ನಾಯ್ಕ ಸ್ಮರಿಸಿದ್ದಾರೆ.

ಅರಣ್ಯವಾಸಿಗಳ ಹಕ್ಕಿಗಾಗಿ ನಡೆದ ಹೋರಾಟಗಳಲ್ಲಿ ಅವರ ಪಾತ್ರ ವಿಶೇಷವಾಗಿದ್ದು, ಹೋರಾಟಗಾರರೊಂದಿಗೆ ನಿಂತು ಧೈರ್ಯ ತುಂಬಿದ ನಾಯಕತ್ವವನ್ನು ಜಿಲ್ಲೆ ಸದಾ ನೆನಪಿಸಿಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

ರಮಾನಂದ ನಾಯಕರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ರವೀಂದ್ರ ನಾಯ್ಕ ಪ್ರಾರ್ಥಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share