Thursday, October 22, 2026
HomeAgricultureಮಳೆ ಕೊರತೆ; ಮೇವಿನ ಬೀಜದ ಉಚಿತ ವಿತರಣೆ

ಮಳೆ ಕೊರತೆ; ಮೇವಿನ ಬೀಜದ ಉಚಿತ ವಿತರಣೆ

ಕಾರವಾರ: ಮುಂಗಾರು ಮಳೆಯ ಕೊರತೆಯಿಂದ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ, ಉತ್ತರ ಕನ್ನಡ ಜಿಲ್ಲೆಯ ಜಾನುವಾರು ಸಾಕಣೆದಾರ ರೈತರಿಗೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ವಿವಿಧ ತಳಿಯ ಮೇವಿನ ಬೀಜದ ಕಿರುಪೊಟ್ಟಣಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ.

ಈ ಯೋಜನೆಯಡಿ ಸೌಲಭ್ಯ ಪಡೆಯಲು ಆಸಕ್ತ ರೈತರು ಆಧಾರ್ ಕಾರ್ಡ್, ಫ್ರೂಟ್ಸ್ ಐಡಿ ಹಾಗೂ ಜಮೀನಿನ ಪಹಣಿ ಪ್ರತಿಯೊಂದಿಗೆ ಒಂದು ವಾರದೊಳಗೆ ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬೇಕು. ಪಶುವೈದ್ಯಕೀಯ ಸಂಸ್ಥೆಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಗ್ರಾಮ ಪಂಚಾಯಿತಿಗಳ ಮೂಲಕ ನಿಯಮಾನುಸಾರ ಮೇವಿನ ಬೀಜ ವಿತರಿಸಲಾಗುತ್ತದೆ.

ಇದೇ ವೇಳೆ, ತಮ್ಮ ಜಾನುವಾರುಗಳಿಗೆ ಅಗತ್ಯವಿರುವುದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮೇವು ಹೊಂದಿರುವ ರೈತರು ಹೆಚ್ಚುವರಿ ಮೇವಿನ ಲಭ್ಯತೆ ಹಾಗೂ ದೂರವಾಣಿ ಸಂಖ್ಯೆಯನ್ನೂ ನೋಂದಾಯಿಸಿಕೊಳ್ಳಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ತಾಲೂಕುವಾರು ಅಧಿಕಾರಿಗಳನ್ನು ಸಂಪರ್ಕಿಸಬಹುದು.

  • ಅಂಕೋಲಾ: 9743784603
  • ಭಟ್ಕಳ: 6361298886
  • ಹಳಿಯಾಳ: 9845806840
  • ದಾಂಡೇಲಿ: 9483940324
  • ಹೊನ್ನಾವರ: 6361298886
  • ಕಾರವಾರ: 9620092951
  • ಕುಮಟಾ: 9449209013
  • ಮುಂಡಗೋಡ: 9449753809
  • ಶಿರಸಿ: 8618474032
  • ಸಿದ್ದಾಪುರ: 9449053634
  • ಯಲ್ಲಾಪುರ: 9916284949
  • ಜೋಯಿಡಾ: 8660217631, 9535564885

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share