Saturday, June 13, 2026
HomeLocal Newsಅಣಬೆ ಬೇಸಾಯ ಕುರಿತು ಉಚಿತ ತರಬೇತಿ

ಅಣಬೆ ಬೇಸಾಯ ಕುರಿತು ಉಚಿತ ತರಬೇತಿ

ಕಾರವಾರ: ಕೆನರಾ ಬ್ಯಾಂಕ್ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ಗಳ ಸಹಯೋಗದಲ್ಲಿ ಕಾರ್ಯನಿರ್ವಹಿಸುತ್ತಿರುವ ರುಡ್‌ಸೆಟ್ (RUDSET) ಸಂಸ್ಥೆಯು ಅಣಬೆ ಬೇಸಾಯ ಕುರಿತು 10 ದಿನಗಳ ಉಚಿತ ತರಬೇತಿ ಕಾರ್ಯಕ್ರಮವನ್ನು ಜೂನ್ 23ರಿಂದ ಆಯೋಜಿಸಿದ್ದು, ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಜಿದಾರರು 18ರಿಂದ 50 ವರ್ಷದೊಳಗಿನವರಾಗಿದ್ದು, ಕನ್ನಡ ಭಾಷೆ ಓದಲು ಹಾಗೂ ಬರೆಯಲು ತಿಳಿದಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಹೊಂದಿರುವುದು ಕಡ್ಡಾಯವಾಗಿದೆ.

ತರಬೇತಿಯಲ್ಲಿ ಭಾಗವಹಿಸಲು ಆಸಕ್ತರು ಜೂನ್ 20ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.

ಈ ತರಬೇತಿ ಸಂಪೂರ್ಣ ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯ ಒದಗಿಸಲಾಗುತ್ತದೆ. ತರಬೇತಿ ಯಶಸ್ವಿಯಾಗಿ ಪೂರ್ಣಗೊಳಿಸಿದವರಿಗೆ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಹಾಗೂ ನೋಂದಣಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಚೇರಿಯನ್ನು ಅಥವಾ ಮೊಬೈಲ್-‌  93801 62042, 94815 06564, 94817 78047 ಸಂಪರ್ಕಿಸಬಹುದು ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share